Tumkurnews
ಬೆಂಗಳೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೈ ಹಿಡಿದರು.
ಒಂದೆರಡು ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ದೊಡ್ಡ ಸಂಘಟನಾ ಚುತುರನಲ್ಲ: ಕೆ.ಎನ್ ರಾಜಣ್ಣ
ಕಾಂಗ್ರೆಸ್ ಸೇರ್ಪಡೆಗೆ ಕಾರಣ?: ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೇ ಪ್ರಮುಖ ಕಾರಣ ಎಂದು ಸ್ವತಃ ಗೌರಿಶಂಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ‘ನಾವು ಸುಮಾರು 10, 13 ವರ್ಷಗಳಿಂದ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಬಹಳ ಜಿದ್ದಾಜಿದ್ದಿನ ಪೈಪೋಟಿ ಇದೆ. ಒಂದೇ ಗ್ರಾಮದ ಜನರು ಬೇರೆ ಬೇರೆ ಪಕ್ಷ ಅನ್ನುವ ಕಾರಣಕ್ಕೆ ಪರಸ್ಪರ ಮಾತನಾಡುವುದಿಲ್ಲ. ಇಂತಹ ಸಂದರ್ಭದಲ್ಲಿ ಬಿಜೆಪಿ ವಿರುದ್ಧ, ಸ್ಥಳೀಯ ಶಾಸಕರ ವಿರುದ್ಧ ರಾಜಕಾರಣ ಮಾಡಿಕೊಂಡ ಬಂದ ನಾವು ಈಗ ಮೈತ್ರಿ ಎಂದು ಒಂದಾಗುವುದು ಹೇಗೆ?’ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯವಾಗಿ ಈ ಮೈತ್ರಿ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವೇ? ಮುಂಬರುವ ಜಿಪಂ, ತಾಪಂ ಚುನಾವಣೆಗೂ ಅನ್ವಯಿಸುತ್ತದೆಯೇ? ಸ್ಥಳೀಯ ಚುನಾವಣೆಯಲ್ಲಿ ನಾವು ಯಾರನ್ನು ಬೆಂಬಲಿಸಬೇಕು? ನಮ್ಮಲ್ಲಿ ಅನೇಕರು ಜಿಪಂ, ತಾಪಂ ಸದಸ್ಯರಾಗಲು ಆಕಾಂಕ್ಷಿಗಳಾಗಿದ್ದಾರೆ. ನಾವು ಟಿಕೆಟ್ ಯಾರನ್ನು ಕೇಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಮೈತ್ರಿ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಈ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡರ ಗಮನಕ್ಕೆ ತರಲಾಗಿತ್ತು. ಆದರೆ ಕುಮಾರಸ್ವಾಮಿ ಮೌನವಾಗಿದ್ದಾರೆ. ಕಾರ್ಯಕರ್ತರ ಭವಿಷ್ಯಕ್ಕಾಗಿ ನಾನು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದರು.
ಬಿಜೆಪಿ- ಜೆಡಿಎಸ್ ಮೈತ್ರಿ: ಡಿ.ಸಿ ಗೌರಿಶಂಕರ್ ವಿರೋಧ
+ There are no comments
Add yours