ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಿ: ಶಾಸಕ ಎಂ.ಟಿ ಕೃಷ್ಣಪ್ಪ
Tumkurnews
ತುರುವೇಕೆರೆ: ಪ್ರತಿ ನಿತ್ಯ ಶಾಲಾಕಾಲೇಜುಗಳಿಗೆ ತೆರಳುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ತೀವ್ರ ಪರದಾಡುತ್ತಿದ್ದಾರೆ.
ಹಲವೆಡೆ ಬಸ್ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದೂ ಆಗಿದೆ. ಆದರೆ ನಿಗಮದ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲಾಗಿದೆ.
ಜನಪ್ರತಿನಿಧಿಗಳು ಮೌನ: ಜಿಲ್ಲೆಯ ವಿದ್ಯಾರ್ಥಿಗಳು ಪ್ರತಿ ನಿತ್ಯ ಎದುರಿಸುತ್ತಿರುವ ಸಾರಿಗೆ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಕೂಡ ಸ್ಪಂದಿಸುತ್ತಿಲ್ಲ. ನೂರಾರು ವಿದ್ಯಾರ್ಥಿಗಳಿಗೆ ಒಂದು ಬಸ್ ಬರುತ್ತದೆ, ಎಲ್ಲರೂ ಮುಗಿ ಬಿದ್ದು ಬಸ್ ಹತ್ತುತ್ತಾರೆ. ಹೆಚ್ಚುವರಿ ಬಸ್ ಸೌಲಭ್ಯ ಒದಗಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ.
ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಇಲ್ಲಿದೆ ಆದೇಶ ಪ್ರತಿ
ಎಂಟಿಕೆ ಸ್ಪಂದನೆ: ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗ್ಗೆ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಗಮನ ಹರಿಸಿದ್ದಾರೆ ಎನ್ನುವುದು ಸದ್ಯಕ್ಕೆ ಸಮಾಧಾನಕರ. ನವೆಂಬರ್ 16ರಂದು ತುರುವೇಕೆರೆ ಪಟ್ಟಣದಲ್ಲಿ ನಡೆದ ಜನತಾ ದರ್ಶನದಲ್ಲಿ ಅವರು ಸಾರಿಗೆ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಒತ್ತಾಯಿಸಿದರು.
(ತುಮಕೂರು KSRTC ಬಸ್ ನಿಲ್ದಾಣದಲ್ಲಿ ತುಂಬಿ ತುಳುಕುತ್ತಿರುವ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ನಿಂತಿರುವುದು)
ಈ ಬಗ್ಗೆ ಮಾತನಾಡಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸದಾ ಯೋಚಿಸುವ ಜನಪ್ರತಿನಿಧಿಗಳು ನಾಳಿನ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಂತಹ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆಯೂ ಯೋಚಿಸಬೇಕಿದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳನ್ನು ಅಭಿವೃದ್ಧಿಯ ಭಾಗವಲ್ಲ ಎಂದು ಪರಿಗಣಿಸಿದಂತಾಗುತ್ತದೆ.
ತುಮಕೂರು KSRTC ಬಸ್ ನಿಲ್ದಾಣ: ಅಧಿಕಾರಿಗಳ ಮನವಿ ತಿರಸ್ಕರಿಸಿದ ಪರಮೇಶ್ವರ್
+ There are no comments
Add yours