ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ: ಮಹಿಳೆಯರಿಂದ ಅರ್ಜಿ ಆಹ್ವಾನ
Tumkurnews
ತುಮಕೂರು: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ “ಸಖಿ-ಒನ್ ಸ್ಟಾಪ್ ಸೆಂಟರ್” ಹೆಚ್ಚುವರಿ ಘಟಕವನ್ನು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸದರಿ ಘಟಕಕ್ಕೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಂದು ಸ್ಪರ್ಧಾತ್ಮಕ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ಅಂಶಗಳು ನಿಮಗೆ ಗೊತ್ತಿರಲಿ
ಘಟಕ ಆಡಳಿತಾಧಿಕಾರಿ (Centre Administrator )-01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು, ಕೇಸ್ ವರ್ಕರ್-01 ಹುದ್ದೆ, ವಕೀಲರು(ಪ್ಯಾರಾ ಲೀಗಲ್‍ಹುದ್ದೆ)-02 ಹುದ್ದೆ, ಸ್ವಚ್ಚತಗಾರರು, ಸೆಕ್ಯೂರಿಟಿ (ಹಗಲು ಮತ್ತು ರಾತ್ರಿ ಕಾವಲು)-01 ಹುದ್ದೆಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಯು ಸಂಪೂರ್ಣ ತಾತ್ಕಾಲಿಕ ಹಾಗೂ ಹೊರಗುತ್ತಿಗೆ ಆಧಾರವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಖಾಯಂ ಹುದ್ದೆಯ ಸವಲತ್ತುಗಳಿಗೆ ಅರ್ಹವಾಗುವುದಿಲ್ಲ ಎಂಬ ಪೂರ್ಣ ಷರತ್ತಿಗೊಳಪಟ್ಟಿರುತ್ತದೆ. ಸಂಬಂಧಿಸಿರುವ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಇನ್ಮುಂದೆ ವಾರದಲ್ಲಿ 2 ದಿನ ಬ್ಯಾಂಕ್ ರಜೆ?!; ಏನಿದು ಸುದ್ದಿ?
ಅರ್ಹ 45 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು “ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume)ವನ್ನು ಎಲ್ಲಾ ದಾಖಲೆಗಳನ್ನು ಪತ್ರಾಂಕಿತ (ಗೆಜಿಟೆಡ್) ಅಧಿಕಾರಿಗಳಿಂದ ದೃಢೀಕರಿಸಿ, ಪಾಸ್‍ಪೋರ್ಟ್ ಅಳತೆಯ 02 ಭಾವಚಿತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಡಿಸೆಂಬರ್ 2, 2023ರೊಳಗಾಗಿ ಖುದ್ದಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0816-2956624ನ್ನು ಸಂರ್ಪಕಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ಅನುಮೋದನೆ
+ There are no comments
Add yours