ಜಾಮೀನಿನ ಮೇಲೆ ಹೊರ ಬಂದ ನಾಲ್ಕೇ ದಿನಕ್ಕೆ ಮುರುಘಾ ಶರಣರಿಗೆ ಶಾಕ್!
ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯದಿಂದ ಬಂಧನದ ಆದೇಶ
ದಾವಣಗೆರೆ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿನಿಂದ ಜೈಲಿನಲ್ಲಿದ್ದ ಡಾ.ಶಿವಮೂರ್ತಿ ಮುರುಘಾ ಶರಣ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರನ್ನು ಬಂಧಿಸುವಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ನಾಲ್ಕೇ ದಿನಕ್ಕೆ ಮುರುಘಾ ಶರಣರನ್ನು ಪೊಲೀಸರು ಪುನಃ ಬಂಧಿಸಿದ್ದಾರೆ.
ಇಲ್ಲಿನ ವಿರಕ್ತ ಮಠದಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
+ There are no comments
Add yours