KSOUನಲ್ಲಿ 2001 ರಿಂದ 2013ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿ!
Tumkurnews
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2001-02 ರಿಂದ 2012-13 ನೇ ಶೈಕ್ಷಣಿಕ ಸಾಲುಗಳಲ್ಲಿ ಸ್ನಾತಕ, ಸ್ನಾತಕೋತ್ತರ(ಇನ್‍ಹೌಸ್) ಕೋರ್ಸ್‍ಗಳಾದ ಬಿ.ಎ., ಬಿ.ಕಾಂ., ಬಿ.ಎಲ್.ಐ.ಎಸ್ಸಿ ಎಂ.ಎ., ಎಂ.ಸಿ.ಜೆ., ಬಿ.ಇಡಿ., ಎಂ.ಇಡಿ., ಬಿ.ಇಡಿ(ವಿಶೇಷ)., ಎಲ್.ಎಲ್.ಎಂ., ಎಂ.ಟಿ.ಎಂ., ಎಂ.ಬಿ.ಎ(ಲಾ) ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ.ಡಿಪ್ಲೋಮಾ., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ, ತಮ್ಮ ವೈಯುಕ್ತಿಕ ಮತ್ತು ಅನಾರೋಗ್ಯದ ಕಾರಣಗಳಿಂದಾಗಿ ಹಾಗೂ ಕೆಲಸ ಒತ್ತಡಗಳಿಂದ ಪರೀಕ್ಷೆಯನ್ನು ತೆಗೆದುಕೊಂಡಿಲ್ಲದಂತಹ ವಿದ್ಯಾರ್ಥಿಗಳಿಗೆ ತಮ್ಮ ಕನಸಿನ ಸ್ನಾತಕ, ಸ್ನಾತಕೋತ್ತರ ಪದವಿಯನ್ನು ಪಡೆದುಕೊಳ್ಳಲು ಬಾಕಿ ಇರುವ ವಿಷಯಗಳಿಗೆ ಪರೀಕ್ಷೆಯನ್ನು ಬರೆಯಲು ಒಂದು ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ವಿವಿಯು ನೀಡಿರುವ ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಧಕ್ಕೆ ನಿಂತಿದ್ದ ತಮ್ಮ ಸ್ನಾತಕ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್‌ಸೈಟ್ http://ksouportal.com/views/ExamHome.aspx ನ ಮೂಲಕ ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಅಂತರ್ಜಾಲದ (Online) ಮೂಲಕ ಮಾತ್ರ ಪಾವತಿಸುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ: ಮಹಿಳೆಯರಿಂದ ಅರ್ಜಿ ಆಹ್ವಾನ
ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ 16/12/2023 ಹಾಗೂ 200ರೂ ದಂಡ ಶುಲ್ಕದೊಂದಿಗೆ 30/12/2023 ಕಡೆಯ ದಿನಾಂಕವಾಗಿರುತ್ತದೆ. ಮುಂದುವರೆದು ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಗಂಗಸಂದ್ರ ಮುಖ್ಯರಸ್ತೆ, ಮೇಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದಾಗಿದೆ.
ಬಡ ಮಕ್ಕಳ RTE ಶಾಲಾ ಶುಲ್ಕ ಭರಿಸದ ಸರ್ಕಾರ: ಹೋರಾಟದ ಎಚ್ಚರಿಕೆ ನೀಡಿದ ರೂಪ್ಸಾ
+ There are no comments
Add yours