ಮನೆಯಿಂದಲೇ ಯೋಗ ದಿನಾಚರಣೆಗೆ ಡಿಸಿ ಕರೆ

1 min read

 

 

 

 

 

ತುಮಕೂರು ನ್ಯೂಸ್.ಇನ್(ಜೂ.17):

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಆಯುಷ್ ಇಲಾಖೆಯಿಂದ ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗಿದೆ. ಈ ಬಾರಿ ಕೋವಿಡ್ 19 ರೋಗದ ಹಿನ್ನೆಲೆಯಲ್ಲಿ ಯೋಗ ದಿನವನ್ನು ಸಾರ್ವಜನಿಕ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿಲ್ಲವಾದ್ದರಿಂದ ಸಾರ್ವಜನಿಕರು ಅಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ತಮ್ಮ ಮನೆಯಲ್ಲಿಯೇ ಕುಟುಂಬ ಸದಸ್ಯರೊಟ್ಟಿಗೆ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಬೇಕೆಂದರು.
ಆಯುಷ್ ಅಧಿಕಾರಿ ಡಾ.ಸಂಜೀವಮೂರ್ತಿ ಮಾತನಾಡಿ, ಪ್ರಸಕ್ತ ವರ್ಷ ಯೋಗ ಅಟ್ ಹೋಂ ಯೋಗಾ ವಿತ್ ಫ್ಯಾಮಿಲಿ ಎಂಬ ಘೋಷವಾಕ್ಯದೊಂದಿಗೆ “ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಿಎಚ್‍ಓ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಯೋಗ ತಜ್ಞೆ ಡಾ. ಭವ್ಯ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ., ಡಾ.ಪ್ರಭಾಕರ ವಿ.ಎಂ., ಡಾ. ಗುರುಪ್ರಸಾದ್, ಡಾ.ಮಯ್ಯ, ಡಾ.ಹಿರೇಮಠ, ಆಯುಷ್ ಇಲಾಖೆ ಸಹಾಯಕ ಆಡಳಿತ ಅಧಿಕಾರಿ ಅಸ್ಲಾಂ ಭಾಷಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಜಾಹ್ನವಿ ಮತ್ತಿತರರು ಹಾಜರಿದ್ದರು.

You May Also Like

More From Author

+ There are no comments

Add yours