ತುಮಕೂರು: ಜಿಲ್ಲಾಧಿಕಾರಿ ಕಚೇರಿ ಎದುರು ಕಾಡುಗೊಲ್ಲರ ಪ್ರತಿಭಟನೆ

1 min read

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಡುಗೊಲ್ಲರಿಂದ ಪ್ರತಿಭಟನೆ

Tumkurnews
ತುಮಕೂರು: ಕಾಡುಗೊಲ್ಲರಿಗೆ ಎಸ್.ಟಿ. ಮೀಸಲಾತಿ ನೀಡಬೇಕು, ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಕಾಡುಗೊಲ್ಲರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಡುಗೊಲ್ಲರ ಅಭಿವೃದ್ಧಿಗಾಗಿ ಪೂರ್ಣಿಮಾ, ಶ್ರೀನಿವಾಸ್ ದುಡಿದಿದ್ದಾರೆ: ಸ್ವಯಂ ಘೋಷಿತ ಮುಖಂಡರ ಟೀಕೆ ಸರಿಯಲ್ಲ
ಈ ವೇಳೆ ಮಾತನಾಡಿದ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ, ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲವರು ಇನ್ನೂ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಈ ಕಾರಣದಿಂದ ಇವರು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದ ಕಾಡುಗೊಲ್ಲರಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಿ ಸಕಾರದ ಸವಲತ್ತು ದೊರಕಿಸಲು ನೆರವಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕಾಡುಗೊಲ್ಲರ ಜಾತಿಯನ್ನು ಅಂಗೀಕರಿಸಿ ಸರ್ಕಾರ 2018ರಲ್ಲೇ ಆದೇಶ ಮಾಡಿದ್ದರೂ ಸರ್ಕಾರದ ಕಚೇರಿಗಳಲ್ಲಿ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ,ಇದರಿಂದ ಸಮುದಾಯದ ಮಕ್ಕಳ ವಿದ್ಯಾಭ್ಯಾಸ ಹಾಗೂ ಉದ್ಯೋಗದ ಭವಿಷ್ಯಕ್ಕೆ ತೊಂದರೆ ಆಗುತ್ತಿದೆ. ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಆದೇಶ ನೀಡಬೇಕು. ಕಾಂತರಾಜು ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕು. ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಅನುದಾನ ನೀಡಿ ಸಮುದಾಯದ ನೆರವಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.

ಹಸುಗೂಸು ಸಾವು; ಕಾಡುಗೊಲ್ಲರಿಗೆ ಅರಿವು ಮೂಡಿಸಿದ ಜಿಲ್ಲಾಧಿಕಾರಿ
ಸಂಘದ ಜಿಲ್ಲಾಧ್ಯಕ್ಷ ಡಿ.ಕೆ.ಗಂಗಾಧರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲಾ ಸಂಘದ ಗೌರವಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಭದ್ರೇಗೌಡ, ಮುಖಂಡರಾದ ಜಿ.ಕೆ.ನಾಗಣ್ಣ, ಚಿಕ್ಕಪ್ಪಯ್ಯ, ಜಯಣ್ಣ, ಅನಂತು, ದೊಡ್ಡವೀರಯ್ಯ, ರಾಮಣ್ಣ, ಮಂಜುನಾಥ್, ಶಿವಕುಮಾರ್, ತಿಮ್ಮಯ್ಯ, ಮೋಹನ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸರ್ಕಾರದ ಯೋಜನೆಗಳನ್ನು ವಿಫಲಗೊಳಿಸುತ್ತಿರುವ ಒನ್ ಸೆಂಟರ್’ಗಳು!

ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸಲು ವಿರೋಧ ಮಾಡಿಲ್ಲ; ಪೂರ್ಣಿಮ ಶ್ರೀನಿವಾಸ್

You May Also Like

More From Author

+ There are no comments

Add yours