ಎಂಪ್ರೆಸ್ ಪಪೂ ಕಾಲೇಜಿನಲ್ಲಿ 1306 ವಿದ್ಯಾರ್ಥಿಗಳಿಗೆ ಪರೀಕ್ಷೆ

1 min read

ತುಮಕೂರು ನ್ಯೂಸ್.ಇನ್, ಜೂ.17:

ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಗಾಗಿ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು, ಸದರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 1306 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈ ಕಾಲೇಜಿನ 62 ಕೊಠಡಿಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ ಈಗಾಗಲೇ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಡೆಸ್ಕ್‍ಗಳ ಮೇಲೆ ನಮೂದಿಸಲಾಗಿದೆ. ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ಜಿಲ್ಲೆಯಿಂದ 27 ಮಂದಿ, ಬೆಂಗಳೂರಿನಿಂದಲೂ ಬರುವ ವಿದ್ಯಾರ್ಥಿಗಳು ಸೇರಿ ಒಟ್ಟು 1306 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಸಿದ್ದಲಿಂಗಪ್ಪ ತಿಳಿಸಿದ್ದಾರೆ.
ಪರೀಕ್ಷಾ ಕೊಠಡಿಯ ವಿಸ್ತೀರ್ಣದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಹಾಕಲಾಗಿದ್ದು, 20 ರಿಂದ 26 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 8.30 ರಿಂದಲೇ ವಿದ್ಯಾರ್ಥಿಗಳಿಗೋಸ್ಕರ 4 ತಂಡಗಳನ್ನು ರಚನೆ ಮಾಡಿದ್ದು, ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕರು ಹಾಗೂ ಕಾಲೇಜಿನ ಸಿಬ್ಬಂದಿ ಈ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಸ್ಯಾನಿಟೈಸ್ ಮಾಡಿ ಪ್ರತಿಯೊಬ್ಬರಿಗೂ ಮಾಸ್ಕ್ ವಿತರಿಸಲಾಗುವುದು ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳ ದೂರವಾಣಿ ಸಂಖ್ಯೆ ಪಡೆದು, ಅವರಿಂದ ಸಹಿ ಪಡೆಯಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷೆ ಬರೆದು ಹೋಗುವ ತನಕ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಜತೆಗೆ ಕಾಲೇಜಿನ ಉತ್ತಮ ವಾತಾವರಣ ನಿರ್ಮಾಣಕ್ಕೂ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು. ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಯಾವುದೇ ಕಂಟೈನ್ಮೆಂಟ್ ವಲಯ ಹಾಗೂ ಕ್ವಾರಂಟೈನ್ ಕೇಂದ್ರಗಳಿಂದ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

About The Author

You May Also Like

More From Author

+ There are no comments

Add yours