ತುಮಕೂರು: ಸಿದ್ಧಗಂಗಾ ಮಠದಲ್ಲಿ ಗುರು‌ಭವನ ಉದ್ಘಾಟನೆ

1 min read

 

 

 

 

 

ಸಿದ್ಧಗಂಗಾ ಮಠದಲ್ಲಿ ಗುರು‌ಭವನ ಉದ್ಘಾಟನೆ

Tumkurnews
ತುಮಕೂರು: ಸಿದ್ದಗಂಗಾ ಮಠದಲ್ಲಿ ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯವನ್ನು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಿ, ಅವರ ಜೀವನವನ್ನು ರೂಪಿಸಲಾಗುತ್ತಿದೆ. ಇದರಿಂದ ಮಠದ ಹಿರಿಮೆ ಹೆಚ್ಚಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ. ಪರಮೇಶ್ವರ್ ಹೇಳಿದರು.

ಸಿದ್ಧಗಂಗಾ ಮಠದ ಶ್ರೀಗಳ ಅವಹೇಳನ: ಪೊಲೀಸ್ ದೂರು ದಾಖಲು
ಸಿದ್ದಗಂಗಾ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುರುಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದಗಂಗಾ ಮಠದಲ್ಲಿ ಹಾಗೂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಮಠದ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಜಿಲ್ಲಾಧಿಕಾರಿಯಿಂದ ಮಹತ್ವದ ಸೂಚನೆ

ಶ್ರೀ ಶಿವಕುಮಾರ ಸ್ವಾಮೀಜಿಯವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಸಿದ್ಧಲಿಂಗ ಸ್ವಾಮೀಜಿ ಅವರು ಮಠವನ್ನು ಮುನ್ನಡೆಸುತ್ತ ಬರುತ್ತಿದ್ದಾರೆ. ಶ್ರೀಕ್ಷೇತ್ರದಲ್ಲಿ ಮತ್ತಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.
ಶ್ರೀ ಮಠದಲ್ಲಿ ವ್ಯಾಸಂಗ ಮಾಡಿರುವ ಹಲವಾರು ವಿದ್ಯಾರ್ಥಿಗಳು ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ದೇಶ ವಿದೇಶಗಳಲ್ಲಿ ಹಾಗೂ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ಕೂಡ ಮಠದ ಬಗ್ಗೆ ಮತ್ತು ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಮಾತಾಡುತ್ತಾರೆ ಎಂದು ತಿಳಿಸಿದರು.
ಶಿವಯೋಗಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು, ಶಿವಕುಮಾರ ಸ್ವಾಮೀಜಿಯವರನ್ನು ಎಲ್ಲರೂ ಸ್ಮರಿಸಬೇಕಿದೆ. ನಾನು ಕೂಡ ಮಠದಲ್ಲಿ ಓದಿದವನು. ಶ್ರೀಗಳು ಇಂಗ್ಲೀಷ್ ಬಿ.ಎ. ಆನರ್ಸ್ ಪದವೀಧರರು ಆಗಿದ್ದರು. ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಶ್ರೀಗಳಿಂದ ಪ್ರಥಮ ಬಹುಮಾನ ಪಡೆದಿದ್ದೆನು ಎಂದು ಸ್ಮರಿಸಿದರು.

ಗಾಂಜಾ ಇದೆ ಎಂದು ಭಿಕ್ಷುಕನ ಬ್ಯಾಗ್ ಚೆಕ್ ಮಾಡಿದ ಪೊಲೀಸರಿಗೆ ಕಾದಿತ್ತು‌ ಶಾಕ್! ಬೆಚ್ಚಿ ಬಿದ್ದ ಜನ: ವಿಡಿಯೋ
ನಾನು ಎಲ್ಲಿಯೂ ದೇವರನ್ನು ನೋಡಿಲ್ಲ ಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ದೇವರನ್ನು ಕಂಡಿದ್ದೇನೆ ಎಂದು ಹೇಳಿದರು.
ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶಿವ ಸಿದ್ದೇಶ್ವರ ಸ್ವಾಮೀಜಿ ಅವರ ಅರ್ಶಿವಾದ ಮುಂದೆಯೂ ಇದೇರೀತಿ ಇರಲಿ ಎಂದು ಶ್ರೀಗಳಲ್ಲಿ ಮನವಿ ಮಾಡಿದರು.
ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ. ಸಿದ್ದಲಿಂಗ ಸ್ವಾಮಿ ಮಾತನಾಡಿ, ಶ್ರೀ ಮಠದಲ್ಲಿರುವ ಪ್ರಸಾದ ನಿಲಯ, ವಿದ್ಯಾರ್ಥಿಗಳ ವಸತಿ ನಿಲಯ, ಅತಿಥಿ ಗೃಹಗಳನ್ನು ನಿರ್ಮಿಸಲು ಭಕ್ತರು ಸ್ವಯಂ ಪ್ರೇರಿತರಾಗಿ ತಾವೇ ಮುಂದೆ ಬಂದು ಇಂತಹ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಸಿದ್ಧಗಂಗಾ ಮಠ: ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಬೇಸರ ಹೊರ ಹಾಕಿದ ವಿ‌.ಸೋಮಣ್ಣ
ಸೋಮಣ್ಣ ಪ್ರತಿಷ್ಠಾನ ವತಿಯಿಂದ ಶ್ರೀ ಮಠದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡುವುದರ ಮೂಲಕ ಗೌರವಿಸಲಾಗುತ್ತದೆ ಎಂದು ಹೇಳಿದರು.
ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯ ಜಿ.ಎಸ್ ಬಸವರಾಜು ಮಾತನಾಡಿ, ಪರಮೇಶ್ವರ್ ಅವರು ಶಿಕ್ಷಣ ಭೀಷ್ಮರಾದ ಗಂಗಾಧರಯ್ಯ ಅವರ ಹಾಗೆ ಸಮಾಜಮುಖಿ ಕೆಲಸಗಳನ್ನು ಇಂದಿಗೂ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದೇಗುಲ ಮಠದ ಅಧ್ಯಕ್ಷ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿ, ಮಾಜಿ ಸಚಿವ ವಿ. ಸೋಮಣ್ಣ, ಶೈಲಜ ಸೋಮಣ್ಣ, ಶಾಸಕರುಗಳಾದ ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ., ಸಿದ್ದಗಂಗಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಉಪಸ್ಥಿತರಿದ್ದರು.

ತುಮಕೂರು: ಪೊಲೀಸ್ ದೂರುಗಳಿವೆಯೇ? ನೇರವಾಗಿ ಎಸ್.ಪಿ ಕೈಗೆ ಕೊಡಿ! ಇಲ್ಲಿದೆ ಅವಕಾಶ

 

You May Also Like

More From Author

+ There are no comments

Add yours