ಕನ್ನಡದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ

1 min read

 

 

 

 

 

ಕನ್ನಡದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ

Tumkurnews
ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ(85) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯ ತೀವ್ರವಾದ ಹಿನ್ನೆಲೆಯಲ್ಲಿ ಶುಕ್ರವಾರ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು‌‌. ಪುತ್ರ ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ.
ಲೀಲಾವತಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲೆಯಾಳಂ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಕನ್ನಡದಲ್ಲಿ ನಾ ನಿನ್ನ ಮರೆಯಲಾರೆ, ನಾ ನಿನ್ನ ಬಿಡಲಾರೆ, ಹಬ್ಬ, ಕನ್ನಡದ ಕಂದ ಸೇರಿದಂತೆ 400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಲೀಲಾವತಿ ಅವರಿಗೆ 2008ರಲ್ಲಿ ತುಮಕೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

You May Also Like

More From Author

+ There are no comments

Add yours