ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ: 151 ವಿದ್ಯಾರ್ಥಿಗಳು ಗೈರು

1 min read

 

 

 

 

 

ದ್ವಿತೀಯ ಪಿಯುಸಿ ಪರೀಕ್ಷೆ: 151 ವಿದ್ಯಾರ್ಥಿಗಳು ಗೈರು

Tumkurnews
ತುಮಕೂರು: ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಗಣಿತ ವಿಷಯ ಪರೀಕ್ಷೆಗೆ 148 ವಿದ್ಯಾರ್ಥಿಗಳು ಹಾಗೂ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಶಿಕ್ಷಣ ಶಾಸ್ತ್ರ ಪರೀಕ್ಷೆಗೆ 3 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 151 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ತುಮಕೂರು: ಉಂಡೆ ಕೊಬ್ಬರಿ ಖರೀದಿ: ಹೆಚ್ಚುವರಿಯಾಗಿ 10 ಕೇಂದ್ರಗಳನ್ನು ತೆರೆಯಲು ಮಂಡಳಿಗೆ ಸೂಚನೆ
ಗಣಿತ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 10611 ವಿದ್ಯಾರ್ಥಿಗಳ ಪೈಕಿ 10463 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 148 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅದೇ ರೀತಿ ಶಿಕ್ಷಣ ಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 96 ವಿದ್ಯಾರ್ಥಿಗಳ ಪೈಕಿ 93 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಕೇಂದ್ರದಲ್ಲಿ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.

ತುಮಕೂರು: 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: 26 ಸಾವಿರ ನೋಂದಣಿ

You May Also Like

More From Author

+ There are no comments

Add yours