ತುಮಕೂರು: ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

1 min read

 

 

 

 

 

ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

Tumkurnews
ತುಮಕೂರು: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 33 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಆಯ್ಕೆಯಾದವರಿಗೆ 15,197 ರೂ.ಗಳ ಗೌರವ ಸಂಭಾವನೆ ನೀಡಲಾಗುವುದು. ಅರ್ಜಿ ಸಲ್ಲಿಸುವವರು ಆಯಾ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ; 2ಎ/2ಬಿ/3ಎ/3ಬಿ ವರ್ಗದವರಿಗೆ 38 ವರ್ಷ ಹಾಗೂ ಪ.ಜಾತಿ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ತುಮಕೂರು: ಮಾ.19ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಅಭ್ಯರ್ಥಿಗಳು ಅರ್ಜಿಯೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಸರ್ಟಿಫಿಕೇಷನ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪಡೆದಿರುವ ಪ್ರಮಾಣ ಪತ್ರ, ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರುವ ಪ್ರಮಾಣಪತ್ರ, ಚುನಾವಣಾ ಗುರುತಿನ ಚೀಟಿ ಸಲ್ಲಿಸಬೇಕು.
ತಾಲ್ಲೂಕು ತಹಶೀಲ್ದಾರರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ(ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳಿಗೆ ಮಾತ್ರ) ಹಾಗೂ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರ, ಯಾವುದೇ ಮೀಸಲಾತಿ ಸಡಿಲಿಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ಪಡೆದ ದೃಢೀಕರಣ ಪ್ರಮಾಣ ಪತ್ರ, ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದ ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿಯಾಗಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಮತ್ತಿತರ ದಾಖಲಾತಿಗಳನ್ನು ಲಗತ್ತಿಸಬೇಕು.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 24ರೊಳಗಾಗಿ ಜಿಲ್ಲಾ ಪಂಚಾಯತಿ ಕಚೇರಿಗೆ ಸಲ್ಲಿಸಬಹುದಾಗಿದೆ.

ತುಮಕೂರು: ಲೋಕಸಭೆ ಚುನಾವಣೆಗೆ ಏನೇನು ಸಿದ್ಧತೆಗಳಾಗಿವೆ? ಜಿಲ್ಲಾಧಿಕಾರಿ ಮಾಹಿತಿ
ಅರ್ಜಿ ನಮೂನೆ, ಸರ್ಕಾರದ ಅಧಿಸೂಚನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್‍ಸೈಟ್ ವಿಳಾಸ https://zptumakuru.karnataka.gov.in/en ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2272898 ಅಥವಾ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ(ಆಡಳಿತ) ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

You May Also Like

More From Author

+ There are no comments

Add yours