ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ: 737 ವಿದ್ಯಾರ್ಥಿಗಳು ಗೈರು

1 min read

 

 

 

 

 

ದ್ವಿತೀಯ ಪಿಯುಸಿ ಪರೀಕ್ಷೆ: 737 ವಿದ್ಯಾರ್ಥಿಗಳು ಗೈರು

Tumkurnews
ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 20ರಂದು ನಡೆದ ದ್ವಿತೀಯ ಪಿಯುಸಿ ಸಮಾಜಶಾಸ್ತ್ರ ವಿಷಯ ಪರೀಕ್ಷೆಗೆ 660 ಹಾಗೂ ಗಣಕ ವಿಜ್ಞಾನ ವಿಷಯ ಪರೀಕ್ಷೆಗೆ 77 ವಿದ್ಯಾರ್ಥಿಗಳು ಸೇರಿ 737 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಆಗಿದ್ರೆ ಸಾಕು: ಗೃಹರಕ್ಷಕರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲೆಯ 33 ಕೇಂದ್ರಗಳಲ್ಲಿ ನಡೆದ ಸಮಾಜಶಾಸ್ತ್ರ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5142 ವಿದ್ಯಾರ್ಥಿಗಳ ಪೈಕಿ 4482 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 660 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಅದೇ ರೀತಿ ಜಿಲ್ಲೆಯ 27 ಕೇಂದ್ರಗಳಲ್ಲಿ ನಡೆದ ಗಣಕ ವಿಜ್ಞಾನ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 4457 ವಿದ್ಯಾರ್ಥಿಗಳ ಪೈಕಿ 4380 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 77 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಎರಡು ಕೇಂದ್ರಗಳಲ್ಲಿ ನಡೆದ ವಿದ್ಯುನ್ಮಾನಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡ 28 ವಿದ್ಯಾರ್ಥಿಗಳೂ ಹಾಜರಾಗಿದ್ದರು. ಯಾವುದೇ ಕೇಂದ್ರದಲ್ಲಿ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.

ತುಮಕೂರು: ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

You May Also Like

More From Author

+ There are no comments

Add yours