ಜಿಲ್ಲಾಡಳಿತದಿಂದ ಕೆಂಪೇಗೌಡರ ಜಯಂತಿ ಆಚರಣೆ

1 min read

ತುಮಕೂರು(ಜೂ.27) tumkurnews.in:

ಜಿಲ್ಲಾಡಳಿತದಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ನಡೆದ ಶ್ರೀ ನಾಡ ಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಮಾತನಾಡಿದ ಶಾಸಕರು, ಬೆಂಗಳೂರು ವಿಶಾಲವಾಗಿ ಬೆಳೆಯಲು ತಳಹದಿ ಹಾಕಿದವರೇ ಕೆಂಪೇಗೌಡರು,ಇವರ ಆಡಳಿತದ ಅವಧಿಯಲ್ಲಿ ನೂರಾರು ಕೆರೆಕಟ್ಟೆಗಳನ್ನು ಕಟ್ಟಿಸಿದ್ದಾರೆ, ದೇವಾಲಯ ನಿರ್ಮಿಸಿದ್ದಾರೆ, ವ್ಯವಸ್ಥಿತವಾದ ಮಾರುಕಟ್ಟೆ ನಿರ್ಮಾಣಗೊಂಡಿವೆ.ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಮಾತನಾಡಿ, ವಿಶ್ವಕ್ಕೆ ಮಾದರಿಯಾಗುವಂತ ನಗರ ನಿರ್ಮಿಸಿಕೊಟ್ಟು, 16ನೇ ಶತಮಾನದಲ್ಲೆ ಆಡಳಿತ ಮಾದರಿಯನ್ನು ಅಳವಡಿಸಿಕೊಂಡು ನಗರ, ಕೋಟೆಯನ್ನು ನಿರ್ಮಿಸಿದ ಮಹಾನ್ ವ್ಯಕ್ತಿ , ಅವರು ನಡೆದ ದಾರಿ, ನೀಡಿದ ಕೊಡುಗೆ, ನಾಡು, ನಾಡಿನ ಜನತೆಗೆ ಅವಿಸ್ಮರಣೀಯವಾದುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ, ಜಿಲ್ಲಾ ವಕ್ಕಲಿಗರ ಸಂಘದ ಮುಖಂಡರು, ತಾಲ್ಲೂಕು ಪಂಚಾಯಿತಿ ಸದಸ್ಯರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours