ಹುಂಡಿ ಹೊಡೆದು ನಗ, ನಾಣ್ಯ ದೋಚಿದ ಖದೀಮರು

1 min read

Tumkurnews
ತುಮಕೂರು; ತಾಲ್ಲೂಕಿನ ಹುಳ್ಳೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ದೇವಸ್ಥಾನದ ಹುಂಡಿ ಹೊಡೆದು ನಗದು, ಚಿನ್ನಾಭರಣಗಳನ್ನು ದೋಚಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ತುಮಕೂರು ತಾಲ್ಲೂಕಿನ ಹೊನ್ನುಡಿಕೆ ಸಮೀಪ ಇರುವ ಇತಿಹಾಸ ಪ್ರಸಿದ್ಧ ಹುಳ್ಳೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ನಡೆದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್, ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಬ್ಬೂರು ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಳ್ಳೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನ ಬಹಳ ಪುರಾತನವಾದದ್ದು, ಅಲ್ಲದೆ, ಲಕ್ಷಾಂತರ ಭಕ್ತಾಧಿಗಳು ಈ ದೇವಸ್ಥಾನಕ್ಕೆ ನಡೆದುಕೊಳ್ಳುತ್ತಾರೆ. ಹಾಗಾಗಿ ಹುಂಡಿಗೆ ಲಕ್ಷಾಂತರ ಹಣ ಕೂಡ ಸಂಗ್ರಹವಾಗುತ್ತದೆ. ಇದನ್ನೇ ನೋಡಿಕೊಂಡ ಖದೀಮರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಅಂಚೆ ಇಲಾಖೆಯಲ್ಲಿ 38,926 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours