ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ 1457 ವಿದ್ಯಾರ್ಥಿಗಳು ಗೈರು

0 min read

ತುಮಕೂರು ನ್ಯೂಸ್.ಇನ್(ಜೂ.18)
ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯ ಪರೀಕ್ಷೆಗೆ ನೋಂದಣಿಯಾಗಿದ್ದ 24,970 ವಿದ್ಯಾರ್ಥಿಗಳ ಪೈಕಿ 23,513 ವಿದ್ಯಾರ್ಥಿಗಳು ಹಾಜರಾಗಿದ್ದು, 1457 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲಲಿತಕುಮಾರಿ ತಿಳಿಸಿದ್ದಾರೆ. ಪರೀಕ್ಷೆಗೆ ನೋಂದಣಿಯಾದ ಜಿಲ್ಲೆಯ 24300, ಹೊರ ಜಿಲ್ಲೆಯ 665 ಹಾಗೂ ಹೊರ ರಾಜ್ಯದ 5 ವಿದ್ಯಾರ್ಥಿಗಳು ಸೇರಿ 24970 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯ 22851, ಹೊರ ಜಿಲ್ಲೆಯ 657 ಹಾಗೂ ಹೊರ ರಾಜ್ಯದ 5 ವಿದ್ಯಾರ್ಥಿಗಳು ಸೇರಿದಂತೆ 23513 ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಜಿಲ್ಲೆಯ 1449 ಹಾಗೂ ಹೊರ ಜಿಲ್ಲೆಯ 8 ವಿದ್ಯಾರ್ಥಿಗಳು ಸೇರಿ 1457 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷೆಯು ಶಾಂತಿಯುತವಾಗಿ ನಡೆಯಿತು ಎಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours