ತುಮಕೂರು: 7 ಕೋಟಿ ವೆಚ್ಚದ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಅನಾವರಣ: ದೇಶದಲ್ಲೇ ಪ್ರಥಮ ಎಂದ ಪರಂ

7 ಕೋಟಿ ವೆಚ್ಚದ ತುಮಕೂರು ಸ್ಕ್ವೇರ್ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಅನಾವರಣ: ದೇಶದಲ್ಲೇ ಪ್ರಥಮ ಎಂದ ಪರಂ ತುಮಕೂರು: ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಹೆಸರಿನ ವೃತ್ತದಲ್ಲಿ ವಿನೂತನ ಎಲೆಕ್ಟ್ರಾನಿಕ್ ಡಿಸ್‌ಪ್ಲೇ ವ್ಯವಸ್ಥೆಯನ್ನು ನಿರ್ಮಿಸಿರುವುದು ಜನತೆಗೆ ನೀಡಿರುವ ಕೊಡುಗೆಯಾಗಿದೆ. ಇಂತಹ ಬೃಹತ್ ಡಿಜಿಟಲ್ ಡಿಸ್‌ಪ್ಲೇ ವ್ಯವಸ್ಥೆ ದೇಶದ ಯಾವುದೇ ಜಿಲ್ಲಾ ಕೇಂದ್ರದಲ್ಲಿ ಇಲ್ಲ. ಈ ಮೂಲಕ ತುಮಕೂರು ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಎಸ್.ಎಸ್ ವೃತ್ತದಲ್ಲಿ ಶನಿವಾರ ಸುಮಾರು 7 ಕೋಟಿ […]

Continue Reading

ಗಳಿಗೆನಹಳ್ಳಿ, ದೊಡ್ಡಸಾರಂಗಿ ಕೆರೆಗಳಿಗೆ ಹರಿಯಲಿದೆ ಹೇಮಾವತಿ ನೀರು

ಗಳಿಗೆನಹಳ್ಳಿ, ದೊಡ್ಡಸಾರಂಗಿ ಕೆರೆಗಳಿಗೆ ಹರಿಯಲಿದೆ ಹೇಮಾವತಿ ನೀರು 1 ಕೋಟಿ ರೂ. ಪೈಪ್‌ಲೈನ್ ಕಾಮಗಾರಿಗೆ ಶಾಸಕ ಬಿ. ಸುರೇಶ್‌ಗೌಡ ಚಾಲನೆ Tumkurnews.in ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗಳಿಗೆನಹಳ್ಳಿ ಹಾಗೂ ದೊಡ್ಡಸಾರಂಗಿ ಕೆರೆಗಳಿಗೆ ಹೇಮಾವತಿ ನಾಲೆಯ ಹೆಬ್ಬೂರು-ಗೂಳೂರು ಏತ ನೀರಾವರಿ ಯೋಜನೆಯಡಿ ನೀರು ಹರಿಸುವ ಪೈಪ್‌ಲೈನ್ ಕಾಮಗಾರಿಗೆ ಶಾಸಕ ಬಿ. ಸುರೇಶ್‌ಗೌಡ ಬುಧವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಭಾಗದ ಗ್ರಾಮಸ್ಥರ ಬಹುವರ್ಷಗಳ ಕುಡಿಯುವ ನೀರಿನ ಬೇಡಿಕೆಗೆ ಇದೀಗ ಸ್ಪಂದನೆ ದೊರೆತಿದ್ದು, ಯೋಜನೆಯಿಂದ ಕುಡಿಯುವ ನೀರಿನ […]

Continue Reading

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಮನೆಬಾಗಿಲಿಗೆ ಆರೋಗ್ಯ ಸೇವೆ

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಮನೆಬಾಗಿಲಿಗೆ ಆರೋಗ್ಯ ಸೇವೆ ಮನೆಮನೆಗೆ ತೆರಳಿ ಆರೋಗ್ಯ ಸೇವೆ ಒದಗಿಸುವ ಕಾರ್ಯ ಶ್ಲಾಘನೀಯ: ಶಿವಸಿದ್ಧೇಶ್ವರ ಸ್ವಾಮೀಜಿ Tumkurnews.in ತುಮಕೂರು: ವಯೋವೃದ್ಧರು, ಅಸಹಾಯಕರು ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮನೆಬಾಗಿಲಲ್ಲೇ ಆರೋಗ್ಯ ಸೇವೆ ಒದಗಿಸುವುದು ಉತ್ತಮ ಮಾನವೀಯ ಕಾರ್ಯವಾಗಿದೆ ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ನಗರದ ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ರೋಟರಿ ಬೆಂಗಳೂರು ಉದ್ಯೋಗ್ ಹಾಗೂ ರೋಟರಿ ಜಿಲ್ಲೆ 3192ರ ಸಹಯೋಗದೊಂದಿಗೆ ಆರಂಭಿಸಲಾದ ನೂತನ ಫಿಸಿಯೋಥೆರಪಿ ಘಟಕ ಮತ್ತು […]

Continue Reading

ಕನ್ನಡ ರಾಜ್ಯೋತ್ಸವ ಎಲ್ಲರನ್ನೂ ಒಂದುಗೂಡಿಸಲಿ: ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ

ಕನ್ನಡ ರಾಜ್ಯೋತ್ಸವ ಎಲ್ಲರನ್ನೂ ಒಂದುಗೂಡಿಸಲಿ: ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ Tumkurnews.in ತುಮಕೂರು: ಕನ್ನಡ ಭಾಷೆ ಈ ನಾಡಿನ ಹೆಮ್ಮೆಯಾಗಿದ್ದು, ಕನ್ನಡ ರಾಜ್ಯೋತ್ಸವವು ಜಾತಿ, ಧರ್ಮಗಳ ಭೇದವಿಲ್ಲದೆ ಎಲ್ಲರನ್ನೂ ಒಂದುಗೂಡಿಸುವ ಹಬ್ಬವಾಗಿದೆ. ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಪ್ರೀತಿಸಿ, ಉಳಿಸಿ ಬೆಳೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಕುಣಿಗಲ್ ವೃತ್ತದಲ್ಲಿ ಬುಧವಾರ ಕರ್ನಾಟಕ ಸರ್ವಜನಾಂಗ ಸಂರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ದೀಪ […]

Continue Reading

ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ

ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ Tumkurnews.in ತುಮಕೂರು: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಚೇರಿಯನ್ನು ದೀಪಗಳಿಂದ ಅಲಂಕರಿಸಲಾಗಿತ್ತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಉಪಾಧ್ಯಕ್ಷ ಹೆಚ್.ಎಂ. ರವೀಶಯ್ಯ, ಖಜಾಂಚಿ ಗಣೇಶ್ ಪ್ರಸಾದ್, ನಗರಾಧ್ಯಕ್ಷ ಧನುಷ್, ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ವಿರೂಪಾಕ್ಷಪ್ಪ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ವಸಂತ, ಮುಖಂಡರಾದ […]

Continue Reading

ಕುಪ್ಪೂರು ಜಾತ್ರಾ ಮಹೋತ್ಸವಕ್ಕೆ ಯದುವೀರ್ ಒಡೆಯರ್‌ಗೆ ಆಹ್ವಾನ

ಕುಪ್ಪೂರು ಜಾತ್ರಾ ಮಹೋತ್ಸವಕ್ಕೆ ಯದುವೀರ್ ಒಡೆಯರ್‌ಗೆ ಆಹ್ವಾನ ‘ಕುಪ್ಪೂರು ಮರುಳಸಿದ್ಧ ಶ್ರೀ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಹ್ವಾನ Tumkurnews.in ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸುಕ್ಷೇತ್ರ ಕುಪ್ಪೂರು ಗದ್ದುಗೆ ಮಹಾಸಂಸ್ಥಾನ ಮಠದ ಶ್ರೀ ಗುರು ಮರುಳಸಿದ್ಧೇಶ್ವರ ಸ್ವಾಮಿಯವರ ಐತಿಹಾಸಿಕ ಜಾತ್ರಾ ಮಹೋತ್ಸವ ಡಿಸೆಂಬರ್ ತಿಂಗಳಲ್ಲಿ ಅದ್ದೂರಿಯಾಗಿ ನಡೆಯಲಿದೆ. ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ‘ಕುಪ್ಪೂರು ಮರುಳಸಿದ್ಧ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಂಸದ ಹಾಗೂ ಮೈಸೂರು ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಹ್ವಾನಿಸಲಾಯಿತು. ಕುಪ್ಪೂರು ಗದ್ದುಗೆ […]

Continue Reading

ನಾಟಕ, ಸಾಂಸ್ಕೃತಿಕ ಉತ್ಸವಗಳು ಗ್ರಾಮದಲ್ಲಿ ಒಗ್ಗಟ್ಟು ಮೂಡಿಸುತ್ತವೆ: ಕೆ.ಎಸ್. ಸಿದ್ದಲಿಂಗಪ್ಪ

ನಾಟಕ, ಸಾಂಸ್ಕೃತಿಕ ಉತ್ಸವಗಳು ಗ್ರಾಮದಲ್ಲಿ ಒಗ್ಗಟ್ಟು ಮೂಡಿಸುತ್ತವೆ: ಕೆ.ಎಸ್. ಸಿದ್ದಲಿಂಗಪ್ಪ ಸ್ವಾಂದೇನಹಳ್ಳಿಯಲ್ಲಿ ಕರಿಭಂಟನ ಕಾಳಗ ಮೂಡಲಪಾಯ ಬಯಲಾಟ ಪ್ರದರ್ಶನ Tumkurnews.in ತುಮಕೂರು: ನಾಟಕಗಳು ಹಾಗೂ ಸಾಂಸ್ಕೃತಿಕ ಉತ್ಸವಗಳು ಗ್ರಾಮೀಣ ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಹಕಾರಿಯಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ತುಮಕೂರು ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು. ತುಮಕೂರು ತಾಲೂಕು ಸ್ವಾಂದೇನಹಳ್ಳಿ ಗ್ರಾಮದ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರಂಗಸೊಗಡು ಕಲಾ ಟ್ರಸ್ಟ್ (ರಿ.), ಸ್ವಾಂದೇನಹಳ್ಳಿ ಹಾಗೂ […]

Continue Reading

ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್‌ಗೌಡ ವಾಗ್ದಾಳಿ

ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್‌ಗೌಡ ವಾಗ್ದಾಳಿ 29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ Tumkurnews.in ತುಮಕೂರು: ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರು ಕ್ಷೇತ್ರದ 29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಭೇದವಿಲ್ಲದೆ ಅರ್ಹ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ […]

Continue Reading

ಒಂದು ತಿಂಗಳ ಕಾಲ ಭಕ್ತರಿಗೆ ಗೂಳೂರು ಮಹಾಗಣಪತಿ ದರ್ಶನ ಭಾಗ್ಯ

ಒಂದು ತಿಂಗಳ ಕಾಲ ಭಕ್ತರಿಗೆ ಗೂಳೂರು ಮಹಾಗಣಪತಿ ದರ್ಶನ ಭಾಗ್ಯ 18 ಕೋಮಿನವರಿಂದ ವಿಶೇಷ ಪೂಜೆ; ಡಿಸೆಂಬರ್ 12 ಮತ್ತು 13ರಂದು ಅದ್ಧೂರಿ ಗಣೇಶ ಜಾತ್ರೆ Tumkurnews.in ತುಮಕೂರು: ಇತಿಹಾಸ ಪ್ರಸಿದ್ಧ ಗೂಳೂರು ಮಹಾಗಣಪತಿ ಮೂರ್ತಿಯನ್ನು ಬಲಿಪಾಡ್ಯಮಿ ದಿನದಂದು 18 ಕೋಮಿನ ಜನರು ಒಗ್ಗೂಡಿ ವಿವಿಧ ಧಾರ್ಮಿಕ ವಿಧಿವಿಧಾನ ಹಾಗೂ ಸಂಪ್ರದಾಯಗಳೊಂದಿಗೆ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದರೊಂದಿಗೆ ಒಂದು ತಿಂಗಳ ಕಾಲ ನಡೆಯುವ ಮಹಾಗಣಪತಿ ದರ್ಶನೋತ್ಸವಕ್ಕೆ ಚಾಲನೆ ದೊರೆತಿದೆ. ಕಾರ್ತಿಕ ಮಾಸದಲ್ಲಿ ಒಂದು ತಿಂಗಳ ಕಾಲ […]

Continue Reading

ಛಲವಾದಿ ಸಮುದಾಯದ ಸಾಧಕರ ಸನ್ಮಾನಕ್ಕೆ ಅರ್ಜಿ ಆಹ್ವಾನ

ಛಲವಾದಿ ಸಮುದಾಯದ ಸಾಧಕರ ಸನ್ಮಾನಕ್ಕೆ ಅರ್ಜಿ ಆಹ್ವಾನ Tumkurnews.in ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಆಚರಿಸಲಾಗುತ್ತಿದೆ. ಜಯಂತಿ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಛಲವಾದಿ ಸಮುದಾಯದ ಸಾಧಕರನ್ನು ಸನ್ಮಾನಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಾಧಕರು ಸ್ವವಿವರಗಳನ್ನೊಳಗೊಂಡ ಸ್ವಬರಹದ ಅರ್ಜಿಯನ್ನು ನವೆಂಬರ್ 6ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಗುಬ್ಬಿ ವೀರಣ್ಣ […]

Continue Reading