ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡಿ, ಪ್ರತಿಮೆ ಸ್ಥಾಪಿಸಿ; ಸೇಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಪ್ರಣವಾನಂದ ಸ್ವಾಮೀಜಿ ಆಗ್ರಹ

ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡಿ, ಪ್ರತಿಮೆ ಸ್ಥಾಪಿಸಿ; ಸೇಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಪ್ರಣವಾನಂದ ಸ್ವಾಮೀಜಿ ಆಗ್ರಹ Tumkurnews.in ತುಮಕೂರು: ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಸರ್ಕಾರ ಅನುದಾನ ನೀಡಬೇಕು, ಬೆಂಗಳೂರಿನಲ್ಲಿ ನಾರಾಯಣ ಗುರುಗಳ ಪ್ರತಿಮೆ ಸ್ಥಾಪಿಸಬೇಕು ಹಾಗೂ ಕಲ್ಯಾಣ ಕರ್ನಾಟಕದ ಈಡಿಗ ಸಮುದಾಯದ ಜೀವನೋಪಾಯವಾಗಿರುವ ಸೇಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಚಿತ್ತಾಪುರ ತಾಲ್ಲೂಕಿನ ಕರದಾಳ್‌ನ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಶುಕ್ರವಾರ ರಾಷ್ಟ್ರೀಯ ಈಡಿಗ ಮಹಾಮಂಡಳಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ […]

Continue Reading

ಬಸವಣ್ಣನವರ ಅವಹೇಳನ ಆರೋಪ: ಲೇಖಕ ಮತ್ತು ಪ್ರಕಾಶಕರ ವಿರುದ್ಧ ಕ್ರಮಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹ

ಬಸವಣ್ಣನವರ ಅವಹೇಳನ ಆರೋಪ: ಲೇಖಕ ಮತ್ತು ಪ್ರಕಾಶಕರ ವಿರುದ್ಧ ಕ್ರಮಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹ Tumkurnews.in ತುಮಕೂರು: ತುಮಕೂರಿನಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಲೇಖನ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ‘ಬಸವ ಮಂಟಪ’ ಪುಸ್ತಕದ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಬೇಕು ಮತ್ತು ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತುಮಕೂರು ಜಿಲ್ಲಾಧ್ಯಕ್ಷ ಡಾ. ಎಸ್. ಪರಮೇಶ್ವರ್ ಆಗ್ರಹಿಸಿದ್ದಾರೆ. ಈ […]

Continue Reading

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಂದ್ರ ಅವರಿಗೆ ಜಿಲ್ಲಾಧಿಕಾರಿಗಳಿಂದ ಗೌರವ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಂದ್ರ ಅವರಿಗೆ ಜಿಲ್ಲಾಧಿಕಾರಿಗಳಿಂದ ಗೌರವ Tumkurnews.in ತುಮಕೂರು: ತುಮಕೂರು  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿಲ್ಪಾ ಸ್ಟುಡಿಯೋದ ಸುರೇಂದ್ರ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ರಾಜ್ಯೋತ್ಸವ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಟಿ.ಹೆಚ್. ಅನಿಲ್ ಕುಮಾರ್, ನಿಸರ್ಗ ಶೇಖರ್, ಪೂಜಾ ನಾಗರಾಜ್, ಪ್ರೀಮಿಯಂ ಪ್ರಕಾಶ್, ದಾದಾಪೀರ್ ಹಾಗೂ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್. ಸುರೇಶ್ ಸೇರಿದಂತೆ […]

Continue Reading

ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ Tumkurnews.in ತುಮಕೂರು: ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 27ರಂದು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿಯಂದು ಬೆಳಿಗ್ಗೆ 9 ಗಂಟೆಗೆ ಶಿರಾಗೇಟ್‌ನ ಕನಕವೃತ್ತದಿಂದ ಕನಕದಾಸರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ, ಕಲಾತಂಡಗಳೊಂದಿಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ […]

Continue Reading

SSR-2027: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸರಳ ಸಾರಾಂಶ

SSR-2027: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸರಳ ಸಾರಾಂಶ Tumkurnews.in ತುಮಕೂರು: ತುಮಕೂರು ಜಿಲ್ಲೆಯಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR-2027) ಕಾರ್ಯ ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ಈ ಕಾರ್ಯವನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. SIR ಮತ್ತು SSR ಪ್ರಕ್ರಿಯೆಗಳ ನಡುವೆ ವ್ಯತ್ಯಾಸವಿದ್ದು, SIR ಪ್ರಕ್ರಿಯೆಯಲ್ಲಿ ಮತದಾರರ ಮಾಹಿತಿಯನ್ನು […]

Continue Reading

ತುಮಕೂರು: ಹಳ್ಳಿಗಾಡಿನ ಮಕ್ಕಳು ಅತ್ಯಂತ ಧೈರ್ಯ ಶಾಲಿಗಳು: ಮುರುಳೀಧರ ಹಾಲಪ್ಪ

Tumkurnews.in ತುಮಕೂರು: ನಗರ ಪ್ರದೇಶಗಳ ಮಕ್ಕಳಿಗೆ ಹೊಲಿಕೆ ಮಾಡಿದರೆ, ಹಳ್ಳಿಗಾಡಿನ ಮಕ್ಕಳು ಅತ್ಯಂತ ಧೈರ್ಯ ಶಾಲಿಗಳು, ಆತ್ಮವಿಶ್ವಾಸ ಉಳ್ಳವರು.ಇಂಗ್ಲೀಷ್ ಬರಲ್ಲ, ಇನ್ನಿತರ ಅಡೆ, ತಡೆಗಳನ್ನು ಮೆಟ್ಟಿನಿಂತರೇ, ಸಾಧನೆಯ ಶಿಖರ ನಿಮ್ಮದಾಗಲಿದೆ ಎಂದು ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಹಾಲಪ್ಪ ಪ್ರತಿಷ್ಠಾನ ಅಧ್ಯಕ್ಷ ಮುರುಳೀಧರ ಹಾಲಪ್ಪ ಪ್ರತಿಪಾದಿಸಿದ್ದಾರೆ. ನಗರದ ತುಮಕೂರು ವಿವಿ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತುಮಕೂರು ವಿವಿ ಐಕ್ಯೂಎಸಿ ಘಟಕ,ಎಲ್ಲಾ ಪದವಿ ಕಾಲೇಜುಗಳ ಸಹಕಾರದೊಂದಿಗೆ,ಹಾಲಪ್ಪ ಪ್ರತಿಷ್ಠಾನ ಆಯೋಜಿಸಿದ್ದ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಕೈಪಿಡಿ […]

Continue Reading

ಬಂಧಿತ ಕಬ್ಬು ಬೆಳೆಗಾರರನ್ನು ಕೂಡಲೇ ಬಿಡುಗಡೆ ಮಾಡಿ: ರಾಜ್ಯ ರೈತ ಸಂಘ ಒತ್ತಾಯ

ಬಂಧಿತ ಕಬ್ಬು ಬೆಳೆಗಾರರನ್ನು ಕೂಡಲೇ ಬಿಡುಗಡೆ ಮಾಡಿ: ರಾಜ್ಯ ರೈತ ಸಂಘ ಒತ್ತಾಯ Tumkurnews.in ತುಮಕೂರು: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೆದ್ದಾರಿ ತಡೆಗೆ ಮುಂದಾಗಿದ್ದ ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕೂಡಲೇ ಬಂಧಿತ ರೈತರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ. ಶಂಕರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ […]

Continue Reading

ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ

ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ Tumkurnews.in ತುಮಕೂರು: ಉಪಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ಬೆಳಗ್ಗೆ 11.30 ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಅಭಿಯಾನ ಜನಸಭೆ’ ಆಯೋಜಿಸಲಾಗಿದೆ. ಸಭೆಯಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದೇ ರೀತಿ ಜಿಲ್ಲೆಯ ಉಳಿದ ಎಂಟು ತಾಲ್ಲೂಕುಗಳಲ್ಲಿ […]

Continue Reading

ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ

ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ Tumkurnews.in ತುಮಕೂರು: ನಗರದ ಹೊರವಲಯದ ದೇವರಾಯಪಟ್ಟಣ ಕಾಲೋನಿ ಹಾಗೂ ದೇವರಾಯಪಟ್ಟಣ ಬಂಡೆ ಪ್ರದೇಶದಲ್ಲಿ ಕಳೆದ 40 ವರ್ಷಗಳಿಂದ ವಾಸವಾಗಿರುವ 40ಕ್ಕೂ ಅಧಿಕ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಶಾಸಕರ ಕಚೇರಿಗೆ ದೇವರಾಯಪಟ್ಟಣ ಕಾಲೋನಿ ಹಾಗೂ ಬಂಡೆ ಪ್ರದೇಶದ ಮಹಿಳೆಯರು, ವೃದ್ಧರು […]

Continue Reading

ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ Tumkurnews.in ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ […]

Continue Reading