ಬಡವರ ಬದುಕಿಗೆ ಬರೆ ಎಳೆದ ಸರ್ಕಾರ: ಬಿಜೆಪಿ ಟೀಕೆ

ಬಡವರ ಬದುಕಿಗೆ ಬರೆ ಎಳೆದ ಸರ್ಕಾರ: ಬಿಜೆಪಿ ಟೀಕೆ Tumkurnews.in ತುಮಕೂರು: ಹಾಲು, ಮೊಸರು ಹಾಗೂ ವಿದ್ಯುತ್ ದರ ಏರಿಕೆ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿ ಬಡವರ ಮೇಲೆ ಮತ್ತೊಂದು ಹೊರೆ ಹೊರಿಸಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೆ. ವೇದಮೂರ್ತಿ ಟೀಕಿಸಿದ್ದಾರೆ. ದಿನಬಳಕೆಯ ಅಗತ್ಯ ವಸ್ತುಗಳಾದ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಿನ ಪ್ರಮಾಣದಲ್ಲಿ ಏರಿಸಿರುವ ಸರ್ಕಾರ, ಇದೀಗ ಬಸ್ ಪ್ರಯಾಣ ದರವನ್ನೂ ಹೆಚ್ಚಿಸುವ ಮೂಲಕ […]

Continue Reading

ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ: ಲೀಲಾವತಿ ಅಶೋಕ್ ಆಕ್ರೋಶ

ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ: ಲೀಲಾವತಿ ಅಶೋಕ್ ಆಕ್ರೋಶ Tumkurnews.in ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಹಾಲು, ಮೊಸರು, ವಿದ್ಯುತ್ ಹಾಗೂ ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿದೆ ಎಂದು ಜೆಡಿಎಸ್ ನಗರ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಲೀಲಾವತಿ ಅಶೋಕ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಅವುಗಳ ನಿರ್ವಹಣೆಯಲ್ಲಿನ ವೈಫಲ್ಯದಿಂದ ಉಂಟಾದ ನಷ್ಟವನ್ನು ಜನರ ಮೇಲೆ ಬೆಲೆ […]

Continue Reading

ಸ್ವಾಮೀಜಿ ವೃತ್ತ: ಶ್ರೀಗಳ ಗೌರವಕ್ಕೆ ಧಕ್ಕೆಯಾಗದಿರಲಿ: ಸೊಗಡು ಶಿವಣ್ಣ

ಸ್ವಾಮೀಜಿ ವೃತ್ತ: ಶ್ರೀಗಳ ಗೌರವಕ್ಕೆ ಧಕ್ಕೆಯಾಗದಿರಲಿ: ಸೊಗಡು ಶಿವಣ್ಣ Tumkurnews.in ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹೆಸರಿನ ವೃತ್ತದ ನಾಮಕರಣದ ಸಂದರ್ಭದಲ್ಲಿ ಸ್ವಾಮೀಜಿಯವರ ಗೌರವಕ್ಕೆ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ವೃತ್ತವನ್ನು ಅಭಿವೃದ್ಧಿಪಡಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯ ಕಾರ್ಯದರ್ಶಿಯವರ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದ ಅವರು, ತುಮಕೂರು ನಗರದ ಹೃದಯಭಾಗದಲ್ಲಿರುವ […]

Continue Reading

‘ಯಡಿಯೂರಪ್ಪನವರನ್ನು ಏಕವಚನದಲ್ಲಿ ಟೀಕಿಸಿದರೆ ಜನರೂ ಮೆಚ್ಚುವುದಿಲ್ಲ, ದೇವರೂ ಮೆಚ್ಚುವುದಿಲ್ಲ’

‘ಯಡಿಯೂರಪ್ಪನವರನ್ನು ಏಕವಚನದಲ್ಲಿ ಟೀಕಿಸಿದರೆ ಜನರೂ ಮೆಚ್ಚುವುದಿಲ್ಲ, ದೇವರೂ ಮೆಚ್ಚುವುದಿಲ್ಲ’ ಜೆ.ಸಿ. ಮಾಧುಸ್ವಾಮಿ ಹೇಳಿಕೆಗಳಿಗೆ ಶಾಸಕ ಜ್ಯೋತಿಗಣೇಶ್ ಪ್ರತಿಕ್ರಿಯೆ Tumkurnews.in ತುಮಕೂರು: ಹಿರಿಯರು ಹಾಗೂ ಸಂಸದೀಯ ಪಟು ಎಂದು ಹೆಸರಾದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದನ್ನು ಜನರೂ ಮೆಚ್ಚುವುದಿಲ್ಲ, ದೇವರೂ ಮೆಚ್ಚುವುದಿಲ್ಲ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ಜೆ.ಸಿ. ಮಾಧುಸ್ವಾಮಿಯವರು ಇತ್ತೀಚೆಗೆ ಬಿಜೆಪಿ ನಾಯಕರನ್ನು ಟೀಕಿಸಿ ಮಾತನಾಡಿರುವ ಬಗ್ಗೆ ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಶಾಸಕರು, ಮಾಜಿ […]

Continue Reading

ತುಮಕೂರು: ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ

ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ Tumkurnews.in ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್‌ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಧ್ಯರಾತ್ರಿ 1 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಎಲ್‌ಇಡಿ ದೀಪಗಳ ಅಳವಡಿಕೆ ಕಾರ್ಯ, ಬೆಳಕಿನ ವ್ಯವಸ್ಥೆ, ಕಾಮಗಾರಿಯ ಗುಣಮಟ್ಟ ಹಾಗೂ ವಿದ್ಯುತ್ ಸಂಪರ್ಕ ವ್ಯವಸ್ಥೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸರ್ಕಲ್‌ನ ಸೌಂದರ್ಯೀಕರಣ ಹಾಗೂ […]

Continue Reading

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ಹಾಲಿನ ಕ್ಯಾನ್ ಹೊತ್ತು ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ Tumkurnews.in ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಹಾಲಿನ ಖಾಲಿ ಕ್ಯಾನ್‌ಗಳನ್ನು ಹೊತ್ತು ಪ್ರತಿಭಟನೆ ನಡೆಸಿ, ಏರಿಕೆ ಮಾಡಿರುವ ಹಾಲಿನ ದರವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು […]

Continue Reading

ರಾಜ್ಯೋತ್ಸವ ಸಂಭ್ರಮವು ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣ ಬೈರೇಗೌಡ

ರಾಜ್ಯೋತ್ಸವ ಸಂಭ್ರಮವು ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣ ಬೈರೇಗೌಡ ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು: ಸಚಿವರ ಕರೆ Tumkurnews.in ತುಮಕೂರು : ಕರ್ನಾಟಕ ಏಕೀಕರಣಗೊಂಡ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ […]

Continue Reading

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು: ಸಚಿವ ಕೃಷ್ಣ ಬೈರೇಗೌಡ

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು: ಸಚಿವ ಕೃಷ್ಣ ಬೈರೇಗೌಡ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಸರ್ಕಾರದ ಪ್ರಯತ್ನ: ಸಚಿವರ ಹೇಳಿಕೆ Tumkurnews.in ತುಮಕೂರು : ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, […]

Continue Reading

ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ

ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ ಆಚಾರ್ಯಶ್ರೀ ಪ್ರಮುಖ್ ಸಾಗರ್‌ಜೀ ನೇತೃತ್ವದಲ್ಲಿ ಮುನಿದೀಕ್ಷಾ ಕಾರ್ಯಕ್ರಮ Tumkurnews.in ತುಮಕೂರು: ಶಾಂತಿ ಮತ್ತು ಅಹಿಂಸೆಯನ್ನು ಸಾರುವ ಜೈನ ಸಮಾಜವು ತ್ಯಾಗ ಹಾಗೂ ಸೇವೆಗೂ ಹೆಸರಾಗಿದೆ. ಮುನಿಗಳು ತ್ಯಾಗದ ಮೂಲಕ ಧಾರ್ಮಿಕ ಮಾರ್ಗದಲ್ಲಿ ಸಾಗಿದರೆ, ಜೈನ ಸಮಾಜದವರು ಸೇವಾಕಾರ್ಯಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಾರೆ. ಈ ಗುರು-ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ನಗರದ ಗಾಜಿನ ಮನೆಯಲ್ಲಿ ಭಾನುವಾರ ಆಚಾರ್ಯಶ್ರೀ 108 […]

Continue Reading

ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಿ: ಹೆಚ್. ನಿಂಗಪ್ಪ

ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಿ: ಹೆಚ್. ನಿಂಗಪ್ಪ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ Tumkurnews.in ತುಮಕೂರು: ಕನ್ನಡ ಎಂಬುದು ಕೇವಲ ಭಾಷೆಯಲ್ಲ, ಅದು ಈ ನೆಲದ ಸಂಸ್ಕೃತಿ, ಸಮೃದ್ಧ ಜ್ಞಾನ ಪರಂಪರೆ ಹಾಗೂ ಕನ್ನಡಿಗರ ಅಸ್ಮಿತೆಯಾಗಿದೆ. ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ ಹೇಳಿದರು. ಭಾನುವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ದೇವಿಯ […]

Continue Reading