ಗ್ರಾಮದೇವತೆ ಭಕ್ತರಿಂದ ಗೌರವಾರ್ಪಣೆ

ಗ್ರಾಮದೇವತೆ ಭಕ್ತರಿಂದ ಗೌರವಾರ್ಪಣೆ Tumkurnews.in ತುಮಕೂರು: ನಗರದ ಚಿಕ್ಕಪೇಟೆಯ ಪೇಟೆ ಗ್ರಾಮದೇವತೆ ಅಮ್ಮನವರ ದೇವಸ್ಥಾನದ ಭಕ್ತರು ಸಮಾಜಸೇವಕಿ ಪೂರ್ಣಿಮಾ ವಿಶ್ವನಾಥ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಪೂರ್ಣಿಮಾ ಅವರ ಪತಿ ವಿಶ್ವನಾಥ್ ಅವರು ಪ್ರತಿ ವರ್ಷ ಈ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಅನ್ನಸಂತರ್ಪಣೆ ವ್ಯವಸ್ಥೆ ಮಾಡುತ್ತಾ ಬಂದಿದ್ದರು. ಇತ್ತೀಚೆಗೆ ವಿಶ್ವನಾಥ್ ಅವರು ನಿಧನರಾಗಿದ್ದು, ಪತಿ ಮಾಡುತ್ತಿದ್ದ ಸೇವಾ ಕಾರ್ಯವನ್ನು ಪೂರ್ಣಿಮಾ ಮುಂದುವರೆಸಿದ್ದರು. ಅವರ ಸೇವೆ ಗೌರವಿಸಿ ಸಮಾಜಸೇವಕ ನಟರಾಜಶೆಟ್ಟರು ಹಾಗೂ ಭಕ್ತರು ಪೂರ್ಣಿಮಾ ಅವರನ್ನು ಸನ್ಮಾನಿಸಿದರು.

Continue Reading

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ ಹೆಬ್ಬೂರು ಪೊಲೀಸ್ ಠಾಣೆ ಎದುರು ತಿಮ್ಮಸಂದ್ರ ಗ್ರಾಮಸ್ಥರ ಪ್ರತಿಭಟನೆ Tumkurnews.in ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ತಿಮ್ಮಸಂದ್ರದ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹಿಡಿಯಲು ನಿರ್ಲಕ್ಷ ಮಾಡಿದ ಹಾಗೂ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತಿಮ್ಮಸಂದ್ರ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹೆಬ್ಬೂರು ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇವೇಳೆ ಅರಣ್ಯಾಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದರು. ಹೆಬ್ಬೂರು ಹೋಬಳಿ […]

Continue Reading

ತುಮಕೂರು: ಅಮಾನಿಕೆರೆಯಲ್ಲಿ ಕಯಾಕಿಂಗ್–ಕನೋಯಿಂಗ್ ತರಬೇತಿಗೆ ವಿದ್ಯಾರ್ಥಿಗಳನ್ನು ಕಳಿಸಿ: ಪೋಷಕರಿಗೆ ಜಿಲ್ಲಾಧಿಕಾರಿ ಮನವಿ

ಅಮಾನಿಕೆರೆಯಲ್ಲಿ ಕಯಾಕಿಂಗ್–ಕನೋಯಿಂಗ್ ತರಬೇತಿಗೆ ವಿದ್ಯಾರ್ಥಿಗಳನ್ನು ಕಳಿಸಿ: ಪೋಷಕರಿಗೆ ಜಿಲ್ಲಾಧಿಕಾರಿ ಮನವಿ Tumkurnews.in ತುಮಕೂರು: ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 15, 2026ರಂದು ಕಯಾಕಿಂಗ್–ಕನೋಯಿಂಗ್ ತರಬೇತಿ ಅಕಾಡೆಮಿಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಸ್ಟೇಟ್ ಒಲಿಂಪಿಕ್ಸ್ ಅಸೋಸಿಯೇಷನ್ (KSOA) ಕಾರ್ಯದರ್ಶಿಗಳು ಈ ಯೋಜನೆಯ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ತುಮಕೂರು ಜಿಲ್ಲೆಯಿಂದ ಕಯಾಕಿಂಗ್–ಕನೋಯಿಂಗ್ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಸ್ಪರ್ಧಿಗಳ ತಂಡವನ್ನು ರೂಪಿಸುವ ಗುರಿ ಹೊಂದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿಗಳು […]

Continue Reading

ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು?

ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು? Tumkurnews.in ತುಮಕೂರು: ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವುದು ತಮ್ಮ ಪ್ರಮುಖ ಆಶಯಗಳಲ್ಲಿ ಒಂದಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಉದ್ದೇಶಕ್ಕಾಗಿ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಭಾನುವಾರ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೆಟ್ರೋ ಯೋಜನೆಯ ವಿವರವಾದ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣಗೊಳಿಸಿ, ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಇದೀಗ ಆಸಕ್ತ ಸಂಸ್ಥೆಗಳಿಂದ ಅಭಿವ್ಯಕ್ತಿ ಆಸಕ್ತಿ […]

Continue Reading

ತುಮಕೂರು: ಧಾನ್ಯ ವರ್ತಕರು ನಗರದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ; ಪರಮೇಶ್ವರ್

ತುಮಕೂರು: ಧಾನ್ಯ ವರ್ತಕರು ನಗರದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ; ಪರಮೇಶ್ವರ್ Tumkurnews.in ತುಮಕೂರು: ಒಂದು ಸಂಸ್ಥೆ ಶತಮಾನ ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ವಿಶ್ವಾಸ ಗಳಿಸುವುದು ಸಾಮಾನ್ಯ ಸಂಗತಿಯಲ್ಲ. 1926ರಲ್ಲಿ ಪ್ರಾರಂಭವಾದ ಧಾನ್ಯ ವ್ಯಾಪಾರಿಗಳ ಸಂಘವು ನೂರು ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿರುವುದು ಹೆಮ್ಮೆಯ ಸಂಗತಿ. ಸಂಘದ ಹಿಂದಿನ ಸಾಧನೆಗಳನ್ನು ಸ್ಮರಿಸುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯಗಳನ್ನು ಕೈಗೊಳ್ಳಲು ಈ ಶತಮಾನೋತ್ಸವ ಪ್ರೇರಣೆಯಾಗಲಿ ಎಂದು ಉಪ ಮುಖ್ಯಮಂತ್ರಿ […]

Continue Reading

ತುಮಕೂರು: ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು

ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು Tumkurnews.in ತುಮಕೂರು: ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ವೇಳೆ ಅಧಿಕಾರಿಯೋರ್ವರ ಮೇಲೆ ಗ್ರಾಮಸ್ಥರಿಂದ ಹಲ್ಲೆ ನಡೆದಿದೆ ಎಂದು ದೂರು ದಾಖಲಾಗಿದೆ. ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಸಮೀಪದ ತಿಮ್ಮಸಂದ್ರದ ಬಳಿ ಗುರುವಾರ ಚಿರತೆಯೊಂದು ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಗ್ರಾಮಸ್ಥರ ಗಲಾಟೆಯಿಂದ ಹೆದರಿದ […]

Continue Reading

ತುಮಕೂರು: ಜಂಬೂಸವಾರಿ ವೇಳೆ ಪಟಾಕಿ ಸಿಡಿಸಿದವರ ವಿರುದ್ಧ ಕೇಸ್ ದಾಖಲು

ತುಮಕೂರು: ಜಂಬೂಸವಾರಿ ವೇಳೆ ಪಟಾಕಿ ಸಿಡಿಸಿದವರ ವಿರುದ್ಧ ಕೇಸ್ ದಾಖಲು Tumkurnews.in ತುಮಕೂರು: ತುಮಕೂರು ದಸರಾ ಪ್ರಯುಕ್ತ ಅ.21ರಂದು ನಗರದಲ್ಲಿ ಜಂಬೂ ಸವಾರಿ ನಡೆಯುತ್ತಿದ್ದ ವೇಳೆ ಪಟಾಕಿ ಸಿಡಿಸಿ, ಆತಂಕ ಸೃಷ್ಟಿಸಿದವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಬಾರಿ ಹೊತ್ತ ಆನೆ ಮೆರವಣಿಗೆ ಭದ್ರಮ್ಮ ಛತ್ರದ ಬಳಿ ಸಾಗುತ್ತಿತ್ತು. ಅದೇ ಸಮಯದಲ್ಲಿ ಸಮೀಪದ ಶ್ರೀರಾಮ ಮಂದಿರದ ಬಳಿ ಕೆಲವು ವ್ಯಕ್ತಿಗಳು ಏಕಾಏಕಿ ಪಟಾಕಿ ಸಿಡಿಸಿದ್ದಾರೆ. ಇದರಿಂದ ಅಂಬಾರಿ ಹೊತ್ತ ಆನೆ, ಇತರೆ ಆನೆಗಳು ಕೆಲಕಾಲ […]

Continue Reading

ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ

ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ Tumkurnews.in ತುಮಕೂರು: ರೋಟರಿ ತುಮಕೂರು ವತಿಯಿಂದ ನಗರದ ರೋಟರಿ ಬಾಲಭವನದಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಭಾಗಲಕ್ಷ್ಮಿ ನಾಗರಾಜ್, ಹಿರಿಯರು ಕಿರಿಯರಿಗೆ ಮಾರ್ಗದರ್ಶನ ನೀಡುವ ಗುರುಗಳಿದ್ದಂತೆ. ಆದ್ದರಿಂದ ನಾವೆಲ್ಲರೂ ಹಿರಿಯರನ್ನು ಗೌರವದಿಂದ ಕಾಣಬೇಕು ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದರು. ರೋಟರಿ ತುಮಕೂರಿನ ಪೂರ್ವಾಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ರೋಟರಿ ಸದಸ್ಯರೆಲ್ಲರೂ ಒಂದು ಕುಟುಂಬದಂತೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸದಸ್ಯರೆಲ್ಲರೂ ಸ್ವಯಂಪ್ರೇರಿತರಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು […]

Continue Reading

‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’

‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’ ಸ್ವಾಮೀಜಿಗಳ ಹೆಸರಿನ ಬದಲಾವಣೆಗೆ ಮಠಾಧೀಶರು, ಮುಖಂಡರ ವಿರೋಧ Tumkurnews.in ತುಮಕೂರು: ನಗರದ ಡಾ. ಶಿವಕುಮಾರ ಸ್ವಾಮೀಜಿಗಳ ವೃತ್ತದ ಹೆಸರನ್ನು ಬದಲಾಯಿಸಲು ಮುಂದಾಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಜಿಲ್ಲಾಡಳಿತದ ಕ್ರಮವನ್ನು ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ವಿವಿಧ ಸಮಾಜಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ತ್ರಿವಿಧ ದಾಸೋಹಿಗಳಾದ ಶಿವಕುಮಾರ ಸ್ವಾಮೀಜಿಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಆ ವೃತ್ತಕ್ಕೆ ‘ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಕ್ವೇರ್’ ಎಂದು ನಾಮಕರಣ ಮಾಡಿ, […]

Continue Reading

‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’

‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’ ಜಿಲ್ಲೆಯ ಪ್ರಾಚಾರ್ಯರ ಮಾಹಿತಿ ಶಿಬಿರದಲ್ಲಿ ಉಪನಿರ್ದೇಶಕಿ ರಾಧ ಸೂಚನೆ Tumkurnews.in ತುಮಕೂರು: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಂದೋಲನವು ಯುವ ಜನಾಂಗದಲ್ಲಿ ಶಿಸ್ತು ಮತ್ತು ಸೇವಾ ಮನೋಭಾವವನ್ನು ಪಾಲಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವಲ್ಲಿ, ಸ್ವತಂತ್ರವಾಗಿ ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರಿಯಾಗಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕಿ ರಾಧಾ ಹೇಳಿದರು. ಶುಕ್ರವಾರ ನಗರದ ಅನನ್ಯ ಕಾಲೇಜು ಸಭಾಂಗಣದಲ್ಲಿ […]

Continue Reading