ಬಂಧಿತ ಕಬ್ಬು ಬೆಳೆಗಾರರನ್ನು ಕೂಡಲೇ ಬಿಡುಗಡೆ ಮಾಡಿ: ರಾಜ್ಯ ರೈತ ಸಂಘ ಒತ್ತಾಯ

ಬಂಧಿತ ಕಬ್ಬು ಬೆಳೆಗಾರರನ್ನು ಕೂಡಲೇ ಬಿಡುಗಡೆ ಮಾಡಿ: ರಾಜ್ಯ ರೈತ ಸಂಘ ಒತ್ತಾಯ Tumkurnews.in ತುಮಕೂರು: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೆದ್ದಾರಿ ತಡೆಗೆ ಮುಂದಾಗಿದ್ದ ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕೂಡಲೇ ಬಂಧಿತ ರೈತರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ. ಶಂಕರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ […]

Continue Reading

ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ

ನ. 21ರಂದು ಕೊರಟಗೆರೆಯಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ Tumkurnews.in ತುಮಕೂರು: ಉಪಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ಬೆಳಗ್ಗೆ 11.30 ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಅಭಿಯಾನ ಜನಸಭೆ’ ಆಯೋಜಿಸಲಾಗಿದೆ. ಸಭೆಯಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದೇ ರೀತಿ ಜಿಲ್ಲೆಯ ಉಳಿದ ಎಂಟು ತಾಲ್ಲೂಕುಗಳಲ್ಲಿ […]

Continue Reading

ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ

ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ Tumkurnews.in ತುಮಕೂರು: ನಗರದ ಹೊರವಲಯದ ದೇವರಾಯಪಟ್ಟಣ ಕಾಲೋನಿ ಹಾಗೂ ದೇವರಾಯಪಟ್ಟಣ ಬಂಡೆ ಪ್ರದೇಶದಲ್ಲಿ ಕಳೆದ 40 ವರ್ಷಗಳಿಂದ ವಾಸವಾಗಿರುವ 40ಕ್ಕೂ ಅಧಿಕ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಶಾಸಕರ ಕಚೇರಿಗೆ ದೇವರಾಯಪಟ್ಟಣ ಕಾಲೋನಿ ಹಾಗೂ ಬಂಡೆ ಪ್ರದೇಶದ ಮಹಿಳೆಯರು, ವೃದ್ಧರು […]

Continue Reading

ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ Tumkurnews.in ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ […]

Continue Reading

ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ Tumkurnews.in ತುಮಕೂರು: ಜಿಲ್ಲೆಯ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯುವ ಸಂಘಗಳ ನೋಂದಣಿ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ತಾಲ್ಲೂಕುವಾರು ಯುವ ಸಂಘಗಳ ನೋಂದಣಿ ಪಟ್ಟಿ ಹಾಗೂ ನೋಂದಣಿ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು. ಇದುವರೆಗೆ ನೋಂದಣಿಯಾಗದ ಯುವ ಸಂಘಗಳನ್ನು ಗುರುತಿಸಿ, ಅವುಗಳ ಸದಸ್ಯರ […]

Continue Reading

ನ. 21ರಂದು ಪಾಲಿಕೆ ಸಭಾಂಗಣದಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ

ನ. 21ರಂದು ಪಾಲಿಕೆ ಸಭಾಂಗಣದಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ Tumkurnews.in ತುಮಕೂರು: ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನವೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಅಧ್ಯಕ್ಷತೆಯಲ್ಲಿ ‘ಪ್ರಜಾಸೇವೆ ಅಭಿಯಾನ ಜನಸಭೆ’ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಸಲು ಆಹ್ವಾನ ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು […]

Continue Reading

ತುಮಕೂರು ಎಸ್ ಪಿ ಅಶೋಕ್ ಕೆ.ವಿ ವರ್ಗಾವಣೆ

ತುಮಕೂರು ಎಸ್ ಪಿ ಅಶೋಕ್ ಕೆ.ವಿ ವರ್ಗಾವಣೆ Tumkurnews.in ತುಮಕೂರು; ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವೆಂಕಟ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನ.18ರಂದು ಹೊರಡಿಸಿರುವ ಸಮೂಹ ವರ್ಗಾವಣೆ ಆದೇಶದಲ್ಲಿ ತುಮಕೂರು ಎಸ್.ಪಿ ಆಗಿರುವ ಐಪಿಎಸ್ ಅಧಿಕಾರಿ ಅಶೋಕ್ ಕೆ.ವಿ ಅವರನ್ನು ಬೆಂಗಳೂರು ಪಶ್ಚಿಮ ನಗರ, ಪೀಣ್ಯ ಇಲ್ಲಿಗೆ ಪೊಲೀಸ್ ಡೆಪ್ಯುಟಿ ಕಮೀಶನರ್ ಆಗಿ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2017ರ ಬ್ಯಾಚ್‌’ನ ಐಪಿಎಸ್ ಅಧಿಕಾರಿಯಾಗಿರುವ ಅಶೋಕ್ ಕೆ.ವಿ ಅವರು 2023ರ ಸೆಪ್ಟೆಂಬರ್ 5ನೇ ತಾರೀಕಿನಿಂದ ತುಮಕೂರು […]

Continue Reading

ಆದರ್ಶ ಗ್ರಾಮ ಯೋಜನೆ ಮೋದಿಯವರ ದೊಡ್ಡ ಕೊಡುಗೆ: ವಿ. ಸೋಮಣ್ಣ

ಆದರ್ಶ ಗ್ರಾಮ ಯೋಜನೆ ಮೋದಿಯವರ ದೊಡ್ಡ ಕೊಡುಗೆ: ವಿ. ಸೋಮಣ್ಣ ಹೆತ್ತೇನಹಳ್ಳಿಯಲ್ಲಿ ಪಿಎಂ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ Tumkurnews.in ತುಮಕೂರು: ಗ್ರಾಮಗಳ ಅಭಿವೃದ್ಧಿ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕಲ್ಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ಮೂಲಕ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯೂ ದೇಶಕ್ಕೆ ಮೋದಿ ಅವರು ನೀಡಿರುವ ಮಹತ್ವದ ಕೊಡುಗೆಯಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. […]

Continue Reading

ಗ್ರಾಮೀಣ ಪದವೀಧರ ನಿರುದ್ಯೋಗಿಗಳಿಗೆ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ

ಗ್ರಾಮೀಣ ಪದವೀಧರ ನಿರುದ್ಯೋಗಿಗಳಿಗೆ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ ನ. 20 ಮತ್ತು 21ರಂದು ತುಮಕೂರು ವಿವಿಯಲ್ಲಿ ಕಾರ್ಯಾಗಾರ: ಮುರುಳೀಧರ ಹಾಲಪ್ಪ Tumkurnews.in ತುಮಕೂರು: ಗ್ರಾಮೀಣ ಭಾಗದ ಪದವೀಧರ ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಸರಿಸಬೇಕಾದ ಕ್ರಮಗಳು ಹಾಗೂ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವ ಉದ್ದೇಶದಿಂದ ನವೆಂಬರ್ 20ರ ಶುಕ್ರವಾರ ಮತ್ತು 21ರ ಶನಿವಾರ ಹಾಲಪ್ಪ ಪ್ರತಿಷ್ಠಾನ ಹಾಗೂ ತುಮಕೂರು ವಿಶ್ವವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಹಯೋಗದಲ್ಲಿ ಎರಡು […]

Continue Reading

ನವೆಂಬರ್ 18ರಂದು ಕರ್ನಾಟಕ ನೌಕರರ ರಾಷ್ಟ್ರವ್ಯಾಪಿ ಮುಷ್ಕರ

ನವೆಂಬರ್ 18ರಂದು ಕರ್ನಾಟಕ ನೌಕರರ ರಾಷ್ಟ್ರವ್ಯಾಪಿ ಮುಷ್ಕರ ಹೊರಗುತ್ತಿಗೆ ನೇಮಕಾತಿ ರದ್ದು, ಬಡ್ತಿ ಒಪ್ಪಂದ ಮರುಸ್ಥಾಪನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹ Tumkurnews.in ತುಮಕೂರು: ಎಲ್ಲಾ ಹಂತದ ನೌಕರರ ಹೊರಗುತ್ತಿಗೆ ನೇಮಕಾತಿ ರದ್ದುಪಡಿಸುವುದು, ಏಕಪಕ್ಷೀಯವಾಗಿ ರದ್ದುಗೊಳಿಸಿರುವ ಬಡ್ತಿ ಒಪ್ಪಂದವನ್ನು ಮರುಸ್ಥಾಪಿಸುವುದು, ವಾರ್ಷಿಕ ಕಡ್ಡಾಯ ರಜೆಯನ್ನು ವಿಶೇಷ ರಜೆ ಎಂದು ಪರಿಗಣಿಸುವುದು ಸೇರಿದಂತೆ ಹತ್ತಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 18ರಂದು ಅಖಿಲ ಭಾರತ ಕರ್ನಾಟಕ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ (AIKBEA) ಮತ್ತು ಕರ್ನಾಟಕ […]

Continue Reading