ತುಮಕೂರು; ಫೆರಿಪೆರಲ್ ರಿಂಗ್ ರಸ್ತೆ ಸರ್ವೆ ವಿರೋಧಿಸಿ ಪ್ರತಿಭಟನೆ ರೈತರ ಭೂಮಿ ಉಳಿಸಲು ಹೋರಾಟ ಅನಿವಾರ್ಯವಾದರೆ ಹೋರಾಟ ಮಾಡುತ್ತೇವೆ: ಡಿ.ಸಿ. ಗೌರಿಶಂಕರ್

Tumkurnews.in ತುಮಕೂರು: ದೇವರ ಹೊಸಹಳ್ಳಿ–ಮಲ್ಲಸಂದ್ರ–ವಸಂತನರಸಾಪುರ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿರುವ ಫೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯ ಸರ್ವೆ ನಡೆಸಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ದೊಡ್ಡಸಾರಂಗಿ ಗ್ರಾಮದ ಬಳಿ ನಡೆದಿದೆ. ರೈತರ ಆಕ್ಷೇಪ ಹಾಗೂ ವಿರೋಧದ ನಡುವೆಯೂ ಸರ್ವೆ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದರಿಂದ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತು. ತಮ್ಮ ಕೃಷಿ ಭೂಮಿ, ಜೀವನಾಧಾರ ಮತ್ತು ಭವಿಷ್ಯದ ಕುರಿತು ಆತಂಕಗೊಂಡ ರೈತರು ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಸರ್ವೆ ಕಾರ್ಯವನ್ನು ತಡೆಯಲು […]

Continue Reading

ತುಮಕೂರು ಗ್ರಾಮಾಂತರದಲ್ಲಿ ಕೋಲಾಹಲ ಎಬ್ಬಿಸಿದ ದಳಪತಿ ಎಚ್.ನಿಂಗಪ್ಪರನ್ನು ವಿಧಾನಸಭೆಗೆ ಕರೆದೊಯ್ಯುವೆ ಎಂದ ಎಚ್‌ಡಿಕೆ; ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು?

Tumkurnews.in ತುಮಕೂರು: ‘ಮಾಜಿ ಶಾಸಕ ಎಚ್.ನಿಂಗಪ್ಪನವರ ಋಣ ನನ್ನ ಮೇಲಿದೆ, ಇವರನ್ನು ಮತ್ತೊಮ್ಮೆ ವಿಧಾನಸಭೆಗೆ ಕರೆದೊಯ್ಯುತ್ತೇನೆ’ ಎಂದು ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದು, ಗ್ರಾಮಾಂತರ ಕ್ಷೇತ್ರದಲ್ಲಿ ಕೋಲಾಹಲ ಎಬ್ಬಿಸಿದೆ. ಸದ್ಯ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿ.ಸುರೇಶ್ ಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಶಾಸಕ ಬಿ.ಸುರೇಶ್ ಗೌಡರನ್ನೇ ಕಣಕ್ಕಿಳಿಸುವ ಭರವಸೆಯಲ್ಲಿದ್ದಾರೆ. ಆದರೇ ಇದೀಗ ಕುಮಾರ […]

Continue Reading

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕರ್ನಾಟಕದ ಪ್ರವಾಸಿಗರ ರಕ್ಷಣೆ: ಬೆಂಗಳೂರಿಗೆ ಮರಳಿದ ಸುಮಾರು 54 ಮಂದಿ

ಬೆಂಗಳೂರು: ನೇಪಾಳ ಮತ್ತು ಟಿಬೆಟ್‌ ಪ್ರದೇಶಗಳಲ್ಲಿ ಉಂಟಾದ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಲುಕಿಕೊಂಡಿದ್ದ ಕರ್ನಾಟಕದ ಪ್ರವಾಸಿಗರ ಪೈಕಿ ಸುಮಾರು 50 ಮಂದಿ ಶನಿವಾರ ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ನೇಪಾಳದಲ್ಲಿ ಸಿಲುಕಿದ್ದ ಪ್ರವಾಸಿಗರು ಉತ್ತರ ಪ್ರದೇಶದ ಗೋರಖ್‌ಪುರ ಮಾರ್ಗವಾಗಿ ಭಾರತ ಪ್ರವೇಶಿಸಿ, ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸಿಗರು ಈ ತಂಡದಲ್ಲಿದ್ದರು. ನೇಪಾಳದ ಪ್ರವಾಹದಿಂದಾಗಿ ತಾವು ಎದುರಿಸಿದ ಪರಿಸ್ಥಿತಿ ಅತ್ಯಂತ ಭಯಾನಕವಾಗಿತ್ತು ಎಂದು ಪ್ರವಾಸಿಗರು […]

Continue Reading

ತುಮಕೂರು: ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ Tumkur news ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮುಖ್ಯ ಉದ್ದೇಶವಾಗಿದ್ದು, ಈ ಪ್ರಕ್ರಿಯೆ ದೇಶದೆಲ್ಲೆಡೆ ಸುಸೂತ್ರವಾಗಿ ನಡೆಸಿದೆ. ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬ ಭಾರತೀಯರು ಮತದಾರರಾಗಲು ಅರ್ಹರು. ಅದಕ್ಕೆ ಯಾವುದೇ ಆಕ್ಷೇಪಣೆ ಇರುವುದಿಲ್ಲ. ಆದರೆ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಶಾಶ್ವತ […]

Continue Reading

ತುಮಕೂರು: ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ

ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ Tumkur news ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಹಾಗೂ 40ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ: ಎಂ. ರಾಮಪ್ಪ ತಿಳಿಸಿದ್ದಾರೆ. ನಗರದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ನಿಗಮದ […]

Continue Reading

ತುಮಕೂರು: 500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಸಿದ ಡಿಸಿ

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಟ್ಟ ಆದೇಶ : ಗೂಳೂರು ಬಳಿ ಅಂದಾಜು 500 ಕೋಟಿ ರೂ. ಮೌಲ್ಯದ 106 ಎಕರೆ ಆಸ್ತಿ ಸ್ವಾಧೀನ ತುಮಕೂರು: ತುಮಕೂರು ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ 106 ಎಕರೆ 23 ಗುಂಟೆ ವಿಸ್ತೀರ್ಣದ ಅಮೂಲ್ಯ ಸಾರ್ವಜನಿಕ ಆಸ್ತಿಯನ್ನು ಸರ್ಕಾರದ ಸ್ವಾಧೀನದಲ್ಲಿ ಉಳಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದ್ದಾರೆ. ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ […]

Continue Reading

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್’ಗೆ ಡಿಕೆಶಿ ಪವರ್

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್’ಗೆ ಡಿಕೆಶಿ ಪವರ್ ರಾಮನಗರ, ಮಾಗಡಿಗೆ ನೀರು ಕೊಂಡೊಯ್ಯಲು ಮರು ಚಾಲನೆ: ಡಿಕೆಶಿ, ಪರಂ ವಿರುದ್ದ ರೈತರು ಗರಂ; ಹೋರಾಟದ ಎಚ್ಚರಿಕೆ – ಅಶೋಕ್ ಆರ್.ಪಿ ತುಮಕೂರು: ಜಿಲ್ಲೆಯ ಜನತೆಯ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹೇಮಾವತಿ ಲಿಂಕ್ ಕೆನಾಲ್ ಯೋಜನೆಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಪುನಃ ಚಾಲನೆ ನೀಡಲಾಗುತ್ತಿದೆ. ಇದು ಜಿಲ್ಲೆಯ ರೈತರು ಮತ್ತು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಮತ್ತೊಂದು ನೀರಿನ ಹೋರಾಟಕ್ಕೆ ತುಮಕೂರು ಸಾಕ್ಷಿಯಾಗುವ ಮುನ್ಸೂಚನೆ ನೀಡಿದೆ. ಸಿದ್ದರಾಮಯ್ಯ […]

Continue Reading

ತುಮಕೂರು: ಮೂರು ಬಾರಿ ಕೈ ತಪ್ಪಿದ ಮುಖ್ಯಮಂತ್ರಿ ಖುರ್ಚಿ; ಪರಮೇಶ್ವರ್ ಕಣ್ಣೀರು

ಮೂರು ಬಾರಿ ಕೈ ತಪ್ಪಿದ ಮುಖ್ಯಮಂತ್ರಿ ಖುರ್ಚಿ; ಪರಮೇಶ್ವರ್ ಕಣ್ಣೀರು ತಮ್ಮ 40 ವರ್ಷಗಳ ರಾಜಕೀಯ ಜೀವನದ ಏಳುಬೀಳನ್ನು ನೆನೆದು ಬಾವುಕರಾದ ಡಾ.ಜಿ ಪರಮೇಶ್ವರ್ Tumkur news ತುಮಕೂರು: ತಮ್ಮ ರಾಜಕೀಯ ಜೀವನ ನಡೆದು ಬಂದ ಹಾದಿ ಹಾಗೂ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ್ದನ್ನು ನೆನೆದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಕಣ್ಣೀರು ಹಾಕಿದ್ದಾರೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು ನಾನು ರಾಜಕೀಯಕ್ಕೆ ಬರುವ ಕಲ್ಪನೆ ಕೂಡ ಇರಲಿಲ್ಲ. ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ನಮ್ಮ […]

Continue Reading

ತುಮಕೂರು: ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ನೀಡುವಂತೆ ಕುಂಚಿಟಿಗ ಮುಖಂಡರ ಆಗ್ರಹ

ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ನೀಡುವಂತೆ ಕುಂಚಿಟಿಗ ಮುಖಂಡರ ಆಗ್ರಹ “ಈಗ ಹಿರಿಯೂರು ಕ್ಷೇತ್ರದ ಉಪ ಚುನಾವಣೆ ಬರುತ್ತಿದೆ. ಹಿರಿಯೂರಿನಲ್ಲಿ ಕುಂಚಿಟಿಗ ಸಮಾಜದ ಮತದಾರರ ಸಂಖ್ಯೆ ಹೆಚ್ಚಾಗಿದೆ. ಆ ಕ್ಷೇತ್ರದಲ್ಲಿ ಟಿ.ಬಿ ಜಯಚಂದ್ರ ಅವರ ಪ್ರಭಾವವೂ ಇದೆ. ಸರ್ಕಾರ ಇವರಿಗೆ ಸಚಿವ ಸ್ಥಾನ ನೀಡದಿದ್ದರೆ ಹಿರಿಯೂರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಾಗಿರುವ ಕುಂಚಿಟಿಗರು ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ”.- ಆರ್.ಕಾಮರಾಜ್, […]

Continue Reading

ತುಮಕೂರು: ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗ ಇದು ನಮ್ಮ ಆದ್ಯತೆ: ಪರಮೇಶ್ವರ್

ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಇಂದು ಕಾಂಪೌಂಡ್‌ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನ್‌ರಾಮ್‌ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನ್‌ರಾಮ್‌ ಪ್ರತಿಮೆ ನಿರ್ಮಿಸಲಾಗುವುದು. -ಡಾ.ಜಿ ಪರಮೇಶ್ವರ್ Tumkur news ತುಮಕೂರು: ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಜಿಲ್ಲಾಡಳಿತ, ತುಮಕೂರು ಮಹಾನಗರ […]

Continue Reading