ತುಮಕೂರು: ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ

ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ ‘ನೀಟ್ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೇಬುಗಳಿಲ್ಲದ ಬಟ್ಟೆ ಧರಿಸಿ,ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಲ್ಲದೆ, ಕುಡಿಯುವ ನೀರಿನ ಬಾಟಲಿಯನ್ನು ತೆಗೆದುಕೊಂಡು ಹೋಗದೆ ಕಷ್ಟಪಟ್ಟು ಪರೀಕ್ಷೆ ಬರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಪರೀಕ್ಷೆ ಎಂದರೆ ವಿದ್ಯಾರ್ಥಿಗಳ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಮೊದಲು ಆಲೋಚಿಸಬೇಕು. ಸರಕಾರ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಿ, ತಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು’. – ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ತುಮಕೂರು […]

Continue Reading

ತುಮಕೂರು: ಮೇ 20ರಂದು ದೇಶಾದ್ಯಾಂತ ಮೆಡಿಕಲ್ ಸ್ಟೋರ್’ಗಳು ಬಂದ್

ಮೆ 20ರಂದು ಔಷಧಿ ವ್ಯಾಪಾರ ವಹಿವಾಟು ಬಂದ್ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔಷಧಿ ವ್ಯಾಪಾರಿಗಳ ಮುಷ್ಕರ Tumkur news ತುಮಕೂರು: ಔಷಧಿ ವ್ಯಾಪಾರಿಗಳು ಎದುರಿಸುತ್ತಿರುವ ಬಿಕ್ಕಟ್ಟು, ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಮೇ 20ರಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯಂತೆ ದೇಶಾದ್ಯಂತ ಎಲ್ಲಾ ಔಷಧ ವ್ಯಾಪಾರ ಮಳಿಗೆ ಬಂದ್ ಮಾಡಲಾಗುತ್ತದೆ. ಈ ಮುಷ್ಕರ ಬೆಂಬಲಿಸಿ ಜಿಲ್ಲೆಯ ಎಲ್ಲಾ ಔಷಧಿ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ಜಿಲ್ಲಾ […]

Continue Reading

ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ:

ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ: ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರೀ ಈಶ್ವರಾನಂದ ಪುರಿ ಶ್ರೀಗಳ ಕರೆ Tumkur news ​ಚಿಕ್ಕನಾಯಕನಹಳ್ಳಿ: ಹುಳಿಯಾರು ಪಟ್ಟಣದ ಬೀರದೇವರ ಕಟ್ಟೆ (ಮೂಲತಪೋ ಸುಕ್ಷೇತ್ರ) ಆವರಣದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗುತ್ತಿರುವ ಕನಕ ಸಮುದಾಯ ಭವನಕ್ಕೆ ಕಾಗಿನೆಲೆ ಕನಕ ಗುರುಪೀಠದ ಕೆಲ್ಲೋಡು ಶಾಖಾಮಠದ ಶ್ರೀ ಈಶ್ವರಾನಂದ ಪುರಿ ಮಹಾಸ್ವಾಮಿಗಳು ಶಾಸಕ ಸಿ.ಬಿ.ಸುರೇಶ್ ಬಾಬು ಅವರೊಂದಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ […]

Continue Reading

Tumkur Viral video Farmer | ಇಂಗ್ಲಿಷ್‌, ಹಿಂದಿಯಲ್ಲಿ ಅಹವಾಲು ಮಂಡಿಸಿದ ವಯೋವೃದ್ಧ ರೈತ; ಶಾಸಕರೇ ಶಾಕ್..! ವಿಡಿಯೋ ವೈರಲ್

ತುಮಕೂರು: ಸಾಮಾನ್ಯವಾಗಿ ಗ್ರಾಮೀಣ ಭಾಗದ ರೈತರು ತಮ್ಮ ಅಹವಾಲುಗಳನ್ನು ಕನ್ನಡದಲ್ಲೇ ಸಲ್ಲಿಸುವುದು ರೂಢಿ. ಆದರೆ ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯೋವೃದ್ಧ ರೈತರೊಬ್ಬರು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ. https://www.facebook.com/share/v/15o2GAwmg8c/ ತಾಲೂಕು ಕಚೇರಿಗೆ ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಬಂದಿದ್ದ ರೈತ ಮೊದಲು ಕನ್ನಡದಲ್ಲಿ ಅಹವಾಲು ಮಂಡಿಸಿ, ಬಳಿಕ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತನಾಡಲು ಆರಂಭಿಸಿದರು. ರೈತನ ಭಾಷಾ ಪಾಂಡಿತ್ಯ ಮತ್ತು ಆತ್ಮವಿಶ್ವಾಸ ಕಂಡು ಅಲ್ಲಿದ್ದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಶಾಸಕ ಸಿ.ಬಿ. ಸುರೇಶ್ […]

Continue Reading

ವನ್ಯಜೀವಿ ಓಡಾಟ ಪ್ರದೇಶಗಳಲ್ಲಿ ಟ್ರೆಕ್ಕಿಂಗ್‌, ವಾಹನ ಸಂಚಾರ ಬಂದ್‌ಗೆ ಸೂಚನೆ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಓಡಾಟ ಹೆಚ್ಚಿರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್ ಹಾಗೂ ವಾಹನ ಸಂಚಾರವನ್ನು ನಿಯಂತ್ರಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಅರಣ್ಯ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಹುಲಿ, ಚಿರತೆ, ಆನೆ ಹಾಗೂ ಕರಡಿಗಳ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಟ್ರೆಕ್ಕಿಂಗ್ ಮಾರ್ಗಗಳು, ಅರಣ್ಯ ಪ್ರವಾಸ ಮಾರ್ಗಗಳು ಹಾಗೂ ಅಪಾಯ ಸಂಭವಿಸುವ […]

Continue Reading

ತುಮಕೂರು: ಗೊರೂರು ಜಲಾಶಯದಿಂದ ತುಮಕೂರಿಗೆ ಹರಿದ ಹೇಮಾವತಿ ನೀರು

Tumkur news ತುಮಕೂರು: ಹಾಸನ ಜಿಲ್ಲೆಯ ಗೊರೂರು ಡ್ಯಾಂನಿಂದ ತುಮಕೂರು ಜಿಲ್ಲೆಯ ನಾಲೆಗೆ ಹೇಮಾವತಿ ನದಿ ನೀರನ್ನು ಹರಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರು ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿ ಹೇಮಾವತಿ ನೀರು ಹರಿಸುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ತುಮಕೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹೇಮಾವತಿ ನದಿ ನೀರನ್ನು ಹರಿಸಲಾಗಿದೆ. ತುಮಕೂರಿನ ಜಲಸಂಗ್ರಹಗಾರದಲ್ಲಿ […]

Continue Reading

NEET | ನೀಟ್ ಯುಜಿ ಮರುಪರೀಕ್ಷೆ: ಮರುನೋಂದಣಿ ಬೇಡ, ಹೊಸ ಪ್ರವೇಶ ಪತ್ರ ನೀಡಲು ಎನ್‌ಟಿಎ ನಿರ್ಧಾರ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್ ಯುಜಿ ಪರೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಹಾಗೂ ಅಸಮರ್ಪಕ ವ್ಯವಸ್ಥೆಯಿಂದಾಗಿ ಕೆಲವು ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಎನ್‌ಟಿಎ ಸ್ಪಷ್ಟನೆ ನೀಡಿದ್ದು, ಈಗಾಗಲೇ ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳು ಮರುನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದೆ. ಮರುಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ಹೊಸ ಪ್ರವೇಶ ಪತ್ರ (Admit Card) ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದೆ. ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಪರೀಕ್ಷಾ […]

Continue Reading

GPSTR ನೇಮಕಾತಿ: ವಿವಾಹಿತ ಮಹಿಳೆಯರ ಆದಾಯ ಪ್ರಮಾಣಪತ್ರ ವಿವಾದಕ್ಕೆ KSAT ತೀರ್ಪು

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT)ವು 2022ನೇ ಸಾಲಿನ 6ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಿಕ್ಷಕರ (GPSTR) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಪ್ರಕರಣಗಳಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಮಾನ್ಯತೆ ಕುರಿತ ವಿವಾದ ಪ್ರಮುಖ ವಿಷಯವಾಗಿತ್ತು. ರಾಜ್ಯದ ಬೆಂಗಳೂರು ದಕ್ಷಿಣ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಾರ್ವಜನಿಕ […]

Continue Reading

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

 ತುಮಕೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮೇ 20ಕ್ಕೆ 3 ವರ್ಷ ತುಂಬಲಿದ್ದು, ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ನಿಮಿತ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಚಿಂತಿಸಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ‘ಜಿಲ್ಲೆಯಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಸಮಾವೇಶವನ್ನು […]

Continue Reading

ತುಮಕೂರು ಬಸ್ ನಿಲ್ದಾಣದಲ್ಲಿ ಹೆಚ್ಚಿದ ಕಳ್ಳರ ಕೈಚಳಕ: ಪ್ರಯಾಣಿಕರೇ ಎಚ್ಚರ!

ತುಮಕೂರು : ಡಿ. ದೇವರಾಜ ಅರಸು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇದೀಗ ಕಳ್ಳರ ಹಾಟ್‌ಸ್ಪಾಟ್ ಆಗಿ ಬದಲಾಗುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕೇಂದ್ರಬಿಂದುವಾಗಿರುವ ಈ ಬಸ್ ನಿಲ್ದಾಣದಲ್ಲಿ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಿದ್ದು, ಜನದಟ್ಟಣೆಯನ್ನೇ ಬಂಡವಾಳವಾಗಿಸಿಕೊಂಡಿರುವ ಕಳ್ಳರ ತಂಡಗಳು ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕನ್ನ ಹಾಕುತ್ತಿವೆ. ಬೆಂಗಳೂರು, ಶಿವಮೊಗ್ಗ, ಪಾವಗಡ ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ತೆರಳುವ ಪ್ರಯಾಣಿಕರೇ ಕಳ್ಳರ ಮುಖ್ಯ ಟಾರ್ಗೆಟ್ ಆಗಿದ್ದಾರೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕುನುಗ್ಗಲಿನ ಸನ್ನಿವೇಶವನ್ನು ಬಳಸಿಕೊಂಡು […]

Continue Reading