ನಾಗವಲ್ಲಿಯಲ್ಲಿ ಅದ್ದೂರಿ ಗಣೇಶ ವಿಸರ್ಜನಾ ಮಹೋತ್ಸವ

ನಾಗವಲ್ಲಿಯಲ್ಲಿ ಅದ್ದೂರಿ ಗಣೇಶ ವಿಸರ್ಜನಾ ಮಹೋತ್ಸವ Tumkurnews.in ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ನಾಗವಲ್ಲಿ ಗ್ರಾಮದಲ್ಲಿ ಸುಮಾರು ಒಂದೂವರೆ ತಿಂಗಳಿನಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು. ಗ್ರಾಮದ 18 ಜಾತಿ-ಜನಾಂಗದವರು ಒಗ್ಗೂಡಿ ಗಣೇಶ ಚತುರ್ಥಿಯಂದು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ಅಂದಿನಿಂದ ಪ್ರತಿದಿನ ವಿಶೇಷ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶನಿವಾರ ನಡೆದ ಗಣೇಶ ವಿಸರ್ಜನಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಅಲಂಕೃತ ವಾಹನದಲ್ಲಿ ಗಣಪತಿ […]

Continue Reading

ಮಾನವೀನ ಸಂದೇಶ ಸಾರಿದ ಮಹರ್ಷಿ: ಜ್ಯೋತಿಗಣೇಶ್

ಮಾನವೀನ ಸಂದೇಶ ಸಾರಿದ ಮಹರ್ಷಿ: ಜ್ಯೋತಿಗಣೇಶ್ ಬಿಜೆಪಿ ಕಚೇರಿಯಲ್ಲಿ ಆದಿಕವಿ ವಾಲ್ಮೀಕಿ ಜಯಂತಿ ಆಚರಣೆ Tumkurnews.in ತುಮಕೂರು: ಮಹರ್ಷಿ ವಾಲ್ಮೀಕಿಯವರು ತಾವು ರಚಿಸಿದ ರಾಮಾಯಣ ಮಹಾಕೃತಿಯ ಮೂಲಕ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಹೇಗೆ ಬದುಕಬೇಕು ಎಂಬ ಆದರ್ಶದ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಅವರ ಆದರ್ಶಗಳು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮತ್ತು ಮಾನವೀಯತೆಯ ಬೆಳಕು ಹರಡುತ್ತವೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ […]

Continue Reading

‘ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ’

‘ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ’ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ Tumkurnews.in ತುಮಕೂರು: ಮಹರ್ಷಿ ವಾಲ್ಮೀಕಿಯವರು ತಮ್ಮ ಅದ್ಭುತ ಕಾವ್ಯಸೃಷ್ಟಿಯಾದ ರಾಮಾಯಣದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರುವ ಮೂಲಕ ಮಾನವ ಬದುಕಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ರಾಜ್ಯ ಜೆಡಿಎಸ್ ಎಸ್.ಟಿ. ಘಟಕದ ಉಪಾಧ್ಯಕ್ಷ ಸೋಲಾರ್ ಕೃಷ್ಣಮೂರ್ತಿ ಹೇಳಿದರು. ಸೋಮವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ […]

Continue Reading

ತುಮಕೂರು: ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು; ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು; ಜಿಲ್ಲಾಧಿಕಾರಿ ಶುಭ ಕಲ್ಯಾಣ್ Tumkurnews.in ತುಮಕೂರು: ಮಹರ್ಷಿ ವಾಲ್ಮೀಕಿಯಂತೆ ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಮಾದರಿ […]

Continue Reading

ಗ್ರಾಮದೇವತೆ ಭಕ್ತರಿಂದ ಗೌರವಾರ್ಪಣೆ

ಗ್ರಾಮದೇವತೆ ಭಕ್ತರಿಂದ ಗೌರವಾರ್ಪಣೆ Tumkurnews.in ತುಮಕೂರು: ನಗರದ ಚಿಕ್ಕಪೇಟೆಯ ಪೇಟೆ ಗ್ರಾಮದೇವತೆ ಅಮ್ಮನವರ ದೇವಸ್ಥಾನದ ಭಕ್ತರು ಸಮಾಜಸೇವಕಿ ಪೂರ್ಣಿಮಾ ವಿಶ್ವನಾಥ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಪೂರ್ಣಿಮಾ ಅವರ ಪತಿ ವಿಶ್ವನಾಥ್ ಅವರು ಪ್ರತಿ ವರ್ಷ ಈ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಅನ್ನಸಂತರ್ಪಣೆ ವ್ಯವಸ್ಥೆ ಮಾಡುತ್ತಾ ಬಂದಿದ್ದರು. ಇತ್ತೀಚೆಗೆ ವಿಶ್ವನಾಥ್ ಅವರು ನಿಧನರಾಗಿದ್ದು, ಪತಿ ಮಾಡುತ್ತಿದ್ದ ಸೇವಾ ಕಾರ್ಯವನ್ನು ಪೂರ್ಣಿಮಾ ಮುಂದುವರೆಸಿದ್ದರು. ಅವರ ಸೇವೆ ಗೌರವಿಸಿ ಸಮಾಜಸೇವಕ ನಟರಾಜಶೆಟ್ಟರು ಹಾಗೂ ಭಕ್ತರು ಪೂರ್ಣಿಮಾ ಅವರನ್ನು ಸನ್ಮಾನಿಸಿದರು.

Continue Reading

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ ಹೆಬ್ಬೂರು ಪೊಲೀಸ್ ಠಾಣೆ ಎದುರು ತಿಮ್ಮಸಂದ್ರ ಗ್ರಾಮಸ್ಥರ ಪ್ರತಿಭಟನೆ Tumkurnews.in ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ತಿಮ್ಮಸಂದ್ರದ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹಿಡಿಯಲು ನಿರ್ಲಕ್ಷ ಮಾಡಿದ ಹಾಗೂ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತಿಮ್ಮಸಂದ್ರ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹೆಬ್ಬೂರು ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇವೇಳೆ ಅರಣ್ಯಾಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದರು. ಹೆಬ್ಬೂರು ಹೋಬಳಿ […]

Continue Reading

ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು?

ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು? Tumkurnews.in ತುಮಕೂರು: ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವುದು ತಮ್ಮ ಪ್ರಮುಖ ಆಶಯಗಳಲ್ಲಿ ಒಂದಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಉದ್ದೇಶಕ್ಕಾಗಿ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಭಾನುವಾರ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೆಟ್ರೋ ಯೋಜನೆಯ ವಿವರವಾದ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣಗೊಳಿಸಿ, ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಇದೀಗ ಆಸಕ್ತ ಸಂಸ್ಥೆಗಳಿಂದ ಅಭಿವ್ಯಕ್ತಿ ಆಸಕ್ತಿ […]

Continue Reading

ತುಮಕೂರು: ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು

ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು Tumkurnews.in ತುಮಕೂರು: ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ವೇಳೆ ಅಧಿಕಾರಿಯೋರ್ವರ ಮೇಲೆ ಗ್ರಾಮಸ್ಥರಿಂದ ಹಲ್ಲೆ ನಡೆದಿದೆ ಎಂದು ದೂರು ದಾಖಲಾಗಿದೆ. ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಸಮೀಪದ ತಿಮ್ಮಸಂದ್ರದ ಬಳಿ ಗುರುವಾರ ಚಿರತೆಯೊಂದು ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಗ್ರಾಮಸ್ಥರ ಗಲಾಟೆಯಿಂದ ಹೆದರಿದ […]

Continue Reading

ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ

ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ Tumkurnews.in ತುಮಕೂರು: ರೋಟರಿ ತುಮಕೂರು ವತಿಯಿಂದ ನಗರದ ರೋಟರಿ ಬಾಲಭವನದಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಭಾಗಲಕ್ಷ್ಮಿ ನಾಗರಾಜ್, ಹಿರಿಯರು ಕಿರಿಯರಿಗೆ ಮಾರ್ಗದರ್ಶನ ನೀಡುವ ಗುರುಗಳಿದ್ದಂತೆ. ಆದ್ದರಿಂದ ನಾವೆಲ್ಲರೂ ಹಿರಿಯರನ್ನು ಗೌರವದಿಂದ ಕಾಣಬೇಕು ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದರು. ರೋಟರಿ ತುಮಕೂರಿನ ಪೂರ್ವಾಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ರೋಟರಿ ಸದಸ್ಯರೆಲ್ಲರೂ ಒಂದು ಕುಟುಂಬದಂತೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸದಸ್ಯರೆಲ್ಲರೂ ಸ್ವಯಂಪ್ರೇರಿತರಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು […]

Continue Reading

‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’

‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’ ಸ್ವಾಮೀಜಿಗಳ ಹೆಸರಿನ ಬದಲಾವಣೆಗೆ ಮಠಾಧೀಶರು, ಮುಖಂಡರ ವಿರೋಧ Tumkurnews.in ತುಮಕೂರು: ನಗರದ ಡಾ. ಶಿವಕುಮಾರ ಸ್ವಾಮೀಜಿಗಳ ವೃತ್ತದ ಹೆಸರನ್ನು ಬದಲಾಯಿಸಲು ಮುಂದಾಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಜಿಲ್ಲಾಡಳಿತದ ಕ್ರಮವನ್ನು ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ವಿವಿಧ ಸಮಾಜಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ತ್ರಿವಿಧ ದಾಸೋಹಿಗಳಾದ ಶಿವಕುಮಾರ ಸ್ವಾಮೀಜಿಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಆ ವೃತ್ತಕ್ಕೆ ‘ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಕ್ವೇರ್’ ಎಂದು ನಾಮಕರಣ ಮಾಡಿ, […]

Continue Reading