ತುಮಕೂರು: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು; ಸಿದ್ದರಾಮಯ್ಯ

ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣಬೈರೇಗೌಡರು ಸ್ವಯಂಸ್ಫೂರ್ತಿಯಿಂದ ಸಾಧನಾ ಸಮರ್ಪಣೆ ಸಮಾವೇಶವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ: ಸಿ.ಎಂ ಮೆಚ್ಚುಗೆ ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆ Tumkur news ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ […]

Continue Reading

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ Tumkur news ತುಮಕೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ […]

Continue Reading

ತುಮಕೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್ 2022ರಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ, ವಿದ್ಯಾರ್ಥಿಗಳಲ್ಲಿ ಹಿಂದೂ, ಮುಸ್ಲಿಂ ಎಂಬ ದ್ವೇಷ ಹರಿಡಿದ್ದು ಬಿಜೆಪಿ ಸರಕಾರ. ಆಗಿದ್ದ ತಪ್ಪನ್ನು ಸರಕಾರ ಸರಿಪಡಿಸಿದೆ. – ಇಕ್ಬಾಲ್ ಅಹಮದ್, ತುಮಕೂರು Tumkur news ತುಮಕೂರು: ಸರಕಾರ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಹೇಳಿದರು. ನಗರದಲ್ಲಿ ಶನಿವಾರ […]

Continue Reading

ತುಮಕೂರು: ಮೋದಿ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ

ಪ್ರಧಾನಿ ಮೋದಿ ಮಿತವ್ಯಯ ಕರೆಗೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ! ಮಿತವ್ಯಯಕ್ಕೆ ಸಹಮತ ಎಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ ಜಯಚಂದ್ರ Tumkur news ತುಮಕೂರು: ಮಿತವ್ಯಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆ ಸ್ವೀಕಾರಾರ್ಹ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಆಗುತ್ತಿರುವ ಅನಾಹುತ ಇದು. ಅದಕ್ಕೆ ನಾವೆಲ್ಲ ಜವಾಬ್ದಾರಿ ಹೊರಬೇಕಾಗುತ್ತದೆ. […]

Continue Reading

ತುಮಕೂರು: ರೈತರಿಗೆ 500 ಕೋಟಿ ರೂ. ವಂಚನೆ

ಹತ್ತಿ ಬೀಜ ಉತ್ಪಾದನಾ ಕಂಪನಿಯಿಂದ ರೈತರಿಗೆ ವಂಚನೆ ಹತ್ತಿ ಬೀಜ ಬೆಳೆದ ರೈತರಿಗೆ 500 ಕೋಟಿ ರೂ. ಬಾಕಿ; ಜಿಲ್ಲಾಡಳಿತದ ಮಧ್ಯಪ್ರವೇಶಕ್ಕೆ ರೈತ ಸಂಘ ಮನವಿ Tumkur news ತುಮಕೂರು: ಹತ್ತಿ ಬೀಜ ಬೆಳೆದುಕೊಟ್ಟ ಜಿಲ್ಲೆಯ ಮಧುಗಿರಿ, ಶಿರಾ, ಪಾವಗಡ ಮತ್ತು ಕೊರಟಗೆರೆ ತಾಲೂಕುಗಳ ರೈತರಿಗೆ ಬೀಜ ಉತ್ಪಾದನಾ ಕಂಪನಿಗಳಿಂದ ಸುಮಾರು 500 ಕೋಟಿ ರೂ. ಬಾಕಿ ಬರಬೇಕಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರ ಬಾಕಿ ಕೊಡಿಸುವುದರ ಜೊತೆಗೆ, ಬೀಜ ಉತ್ಪಾಧನಾ ಕಾಯ್ದೆ ಅನ್ವಯ ರೈತರೊಂದಿಗೆ ಒಪ್ಪಂದ […]

Continue Reading

ತುಮಕೂರು: ಬಾಸ್ಕೆಟ್ ಬಾಲ್ ಬೇಸಿಗೆ ಶಿಬಿರಕ್ಕೆ ಚಾಲನೆ

ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಆರಂಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ: ಮೊಬೈಲ್ ಬಿಟ್ಟು ಅಂಕಣಕ್ಕಿಳಿದ ಮಕ್ಕಳು ತುಮಕೂರು: ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು. ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಶನ್‌ ಆಯೋಜಿಸಿದ್ದ ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು […]

Continue Reading

ತುಮಕೂರು: ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ Tumkur news ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ‌ಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ […]

Continue Reading

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ. ಕರೆ

ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಡಿ.ಸಿ ಕರೆ Tumkur News ತುಮಕೂರು: ಭಾರತ ಸರ್ಕಾರದ ಜನಗಣತಿ-2026 ಕಾರ್ಯದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 15ರವರೆಗೆ ಸ್ವಯಂ ಗಣನೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳು ತಮಗೆ ಸಂಬಂಧಿಸಿದ ಜನಗಣತಿ ಮಾಹಿತಿಯನ್ನು ಸ್ವಯಂವಾಗಿ ಆನ್‌ಲೈನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಜನಗಣತಿ ಕಾರ್ಯವು ವೇಗವಾಗಿ, ಸುಲಭವಾಗಿ ಮತ್ತು ಶುದ್ಧತೆಯಿಂದ ಪೂರ್ಣಗೊಳ್ಳಲು ಸಹಕಾರಿ ಆಗುತ್ತದೆ. […]

Continue Reading

ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧಲಿಂಗ ಶ್ರೀಗಳ ಕಡೆಗಣನೆ!; ಭಕ್ತರ ಆಕ್ರೋಶ

ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧಲಿಂಗ ಶ್ರೀಗಳ ಕಡೆಗಣನೆ!; ಭಕ್ತರ ಆಕ್ರೋಶ ಗುರುವಂದನೆ ಕಾರ್ಯಕ್ರಮದಲ್ಲಿ ಮಠಾಧ್ಯಕ್ಷರನ್ನೇ ಕಡೆಗಣಿಸಲಾಗಿದೆ ಎಂದು ಭಕ್ತರ ಅಸಮಾಧಾನ Tumkur News ತುಮಕೂರು: ಶ್ರೀ ಸಿದ್ದಗಂಗಾ ಮಠದಲ್ಲಿ ಬುಧವಾರ ನಡೆದ ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮಿಗಳ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯನ್ನು ಶಿಷ್ಟಾಚಾರದ ಹೆಸರಿನಲ್ಲಿ ಕಡೆಗಣಿಸಲಾಗಿದೆ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಂದನಾ ಮಹೋತ್ಸವ ಕಾರ್ಯಕ್ರಮದಲ್ಲಿ, ಪೀಠಾಧ್ಯಕ್ಷರಿಗೆ ವೇದಿಕೆಯ ತುದಿಯಲ್ಲಿ ಆಸನದ ವ್ಯವಸ್ಥೆಯನ್ನು ಕಲ್ಪಿಸಿರುವುದು ಇದೀಗ ಭಕ್ತರ […]

Continue Reading

ತುಮಕೂರಿನಲ್ಲೇ ಕೆಲಸ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರಿನಲ್ಲೇ ಕೆಲಸ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಖಾಲಿಯಿರುವ ಕಚೇರಿ ಸಹಾಯಕ, ಅಟೆಂಡರ್ ಹಾಗೂ ವಾಚ್‌ಮನ್, ಗಾರ್ಡನರ್ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಸಹಾಯಕ ಹುದ್ದೆಗೆ BSW/BA/B.Com ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮೂಲ ಲೆಕ್ಕ ನಿರ್ವಹಣೆ ಮಾಡುವ ಅರ್ಹತೆ ಹೊಂದಿದ್ದು, ಸ್ಥಳೀಯ ಭಾಷೆಯನ್ನು ಅಡೆತಡೆಯಿಲ್ಲದೆ […]

Continue Reading