ತುಮಕೂರು: ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ

ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ Tumkurnews.in ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್‌ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಧ್ಯರಾತ್ರಿ 1 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಎಲ್‌ಇಡಿ ದೀಪಗಳ ಅಳವಡಿಕೆ ಕಾರ್ಯ, ಬೆಳಕಿನ ವ್ಯವಸ್ಥೆ, ಕಾಮಗಾರಿಯ ಗುಣಮಟ್ಟ ಹಾಗೂ ವಿದ್ಯುತ್ ಸಂಪರ್ಕ ವ್ಯವಸ್ಥೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸರ್ಕಲ್‌ನ ಸೌಂದರ್ಯೀಕರಣ ಹಾಗೂ […]

Continue Reading

ತುಮಕೂರು: ಅ.30ರಂದು ರಫ್ತು ಪ್ರೋತ್ಸಾಹ ಕಾರ್ಯಾಗಾರ

ಅ.30ರಂದು ರಫ್ತು ಪ್ರೋತ್ಸಾಹ ಕಾರ್ಯಾಗಾರ Tumkurnews.in ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಅಕ್ಟೋಬರ್ 30 ರಂದು ಬೆಳಗ್ಗೆ 9.30 ಗಂಟೆಗೆ ಡಿ.ಐ.ಸಿ. ಹಾಲ್, ಜಿಲ್ಲಾ ಕೈಗಾರಿಕಾ ಕೇಂದ್ರ, ತುಮಕೂರು ಇಲ್ಲಿ ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೋತ್ಸಾಹ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು-೫೭೨೧೦೨ ಅಥವಾ ದೂ.ವಾ.ಸಂ.೦೮೧೬-೨೨೭೫೩೭೦ಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ

ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು; 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆಯೇ ಫಲಿತಾಂಶ Tumkurnews.in ತುಮಕೂರು: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರಮುಖ ಚುನಾವಣೆಯಾಗಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಬೃಹತ್ ಭೂಪ್ರದೇಶ ಹಾಗೂ ಲಕ್ಷಾಂತರ ಪದವೀಧರ ಮತದಾರರನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ನಡೆದ ಚುನಾವಣೆಯು ಮುಂದಿನ ವಿಧಾನ ಸಭೆ […]

Continue Reading

ತುಮಕೂರು: ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು; ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು; ಜಿಲ್ಲಾಧಿಕಾರಿ ಶುಭ ಕಲ್ಯಾಣ್ Tumkurnews.in ತುಮಕೂರು: ಮಹರ್ಷಿ ವಾಲ್ಮೀಕಿಯಂತೆ ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಮಾದರಿ […]

Continue Reading

ತುಮಕೂರು: ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು

ಚಿರತೆ ಸೆರೆಗೆ ಅಡ್ಡಿ, ಅಧಿಕಾರಿ ಮೇಲೆ ಹಲ್ಲೆ; ಗ್ರಾಮಸ್ಥರ ವಿರುದ್ಧ ದೂರು ದಾಖಲು Tumkurnews.in ತುಮಕೂರು: ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ವೇಳೆ ಅಧಿಕಾರಿಯೋರ್ವರ ಮೇಲೆ ಗ್ರಾಮಸ್ಥರಿಂದ ಹಲ್ಲೆ ನಡೆದಿದೆ ಎಂದು ದೂರು ದಾಖಲಾಗಿದೆ. ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಸಮೀಪದ ತಿಮ್ಮಸಂದ್ರದ ಬಳಿ ಗುರುವಾರ ಚಿರತೆಯೊಂದು ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಗ್ರಾಮಸ್ಥರ ಗಲಾಟೆಯಿಂದ ಹೆದರಿದ […]

Continue Reading

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಭದ್ರತಾ ಬಿಕ್ಕಟ್ಟು ಹಾಗೂ ಅದರಿಂದ ಉಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನಾ ನಗರಗಳಲ್ಲಿ ಸಿಲುಕಿರುವ ಕರ್ನಾಟಕದ 600ಕ್ಕೂ ಅಧಿಕ ಉಮ್ರಾ ಯಾತ್ರಿಕರನ್ನು ಸುರಕ್ಷಿತವಾಗಿ ಶೀಘ್ರವೇ ರಾಜ್ಯಕ್ಕೆ ಕರೆತರಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವ […]

Continue Reading

ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನ Tumkurnews.in ತುಮಕೂರು: ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನವು ಜಿಲ್ಲೆಯ 80 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತವಾಗಿ ನಡೆಯಿತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ಐದು ಜಿಲ್ಲೆಗಳನ್ನೊಳಗೊಂಡಿರುವ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ 257 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಎಲ್ಲಾ ಮತಗಟ್ಟೆಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಪದವೀಧರ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದ ದೃಶ್ಯಗಳು […]

Continue Reading

ತುಮಕೂರು: ತುಮುಲ್ ನೇರ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಆಗ್ರಹ

ತುಮುಲ್ ನೇರ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಆಗ್ರಹ Tumkurnews.in ತುಮಕೂರು: ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ(ತುಮುಲ್)ನಲ್ಲಿ 2016–17ನೇ ಸಾಲಿನಲ್ಲಿ ನಡೆಸಿದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇತ್ತೀಚಿನ ಸುಪ್ರಿಂಕೋರ್ಟು ತೀರ್ಪು ಇದಕ್ಕೆ ಸಾಕ್ಷಿ ಎಂಬಂತೆ ಇದೆ. ಹಾಗಾಗಿ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ತನಿಖೆಗೆ ಒಳಪಡಿಸಬೇಕು ಎಂದು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಅರುಣ್‌ಕುಮಾರ್, ವೆಂಕಟೇಶ್, ಶಾಂತಲಾ, ಶಾಂತರಾಜು, ರೇಣುಕಯ್ಯ, ಪುಟ್ಟರಾಜು, ರಜತ್ ಹಾಗೂ ಮಂಜುನಾಥ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]

Continue Reading

ತುಮಕೂರು: ತೆಂಗಿನ ಮರ ಏರಿ ಕುಳಿತ ಚಿರತೆ

ತೆಂಗಿನ ಮರ ಏರಿ ಕುಳಿತ ಚಿರತೆ Tumkurnews.in ತುಮಕೂರು: ತಾಲ್ಲೂಕಿನ ತಿಮ್ಮಸಂದ್ರ ಹೊರವಲಯದಲ್ಲಿ ಗುರುವಾರ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯಲು ಸ್ಥಳಕ್ಕೆ ಹೋದಾಗ ತೆಂಗಿನ ಮರ ಏರಿ ಕುಳಿತು ಚಿರತೆ ಕೆಲ ಹೊತ್ತು ರಕ್ಷಣೆ ಪಡೆಯಿತು. ಅರಣ್ಯ ಇಲಾಖೆ ಅಧಿಕಾರಿಗಳು ನೀಡಿ ಚಿರತೆ ಸೆರೆ ಹಿಡಿಯಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಚಿರತೆ ಮರದಿಂದ ಇಳಿದು ಅಧಿಕಾರಿಗಳಿಗೆ ಸಿಗದಂತೆ ತಪ್ಪಿಸಿಕೊಂಡು ಓಡಿ ಹೋಯಿತು.

Continue Reading

ತುಮಕೂರು: ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ

ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ ಪದವಿಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಬೆಂಬಲಿಸಲು ಮನವಿ Tumkurnews.in ತುಮಕೂರು: ಸರ್ಕಾರದಲ್ಲಿ ಶಿಕ್ಷಕರ ಪರವಾದ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ಶಾಸಕರು ಹೆಚ್ಚು ಆಸಕ್ತಿವಹಿಸಿದ್ದಾರೆ. ಆಗ್ನೇಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ಪದವಿಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ […]

Continue Reading