ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ 

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ವಿವಾಹ ಆಪೇಕ್ಷಿತರು, ಸಂತಾನಭಾಗ್ಯ, ಉದ್ಯೋಗ, ವ್ಯವಹಾರ ಸೇರಿದಂತೆ ನಾನಾ ಬಗೆಯ ಇಷ್ಟಾರ್ಥಗಳ ಪೂರೈಕೆಗಾಗಿ […]

Continue Reading

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ Tumkur news ತುಮಕೂರು: ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ಹಬ್ಬ ಬಲು ದುಬಾರಿಯಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ ಖರೀದಿಗೆ […]

Continue Reading

ತುಮಕೂರು: ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ

ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ Tumkur news ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ 84ನೇ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಸದ್ಭಾವನಾ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರುಗಳು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಸಿಹಿ, ಸದ್ಭಾವನಾ ದಿನದ ಪ್ರತಿಜ್ಞೆ ಸ್ವೀಕರಿಸುವ ಮೂಲಕ […]

Continue Reading

ತುಮಕೂರು: ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ Tumkur news ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ […]

Continue Reading

ತುಮಕೂರು: ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ 1200 ವಿಶ್ವವಿದ್ಯಾಲಯಗಳು ಇದ್ದು, […]

Continue Reading

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ, ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […]

Continue Reading

ತುಮಕೂರು: ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ

ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ: ಸಿದ್ಧಲಿಂಗ ಶ್ರೀ, ಸಚಿವ ವಿ. ಸೋಮಣ್ಣ ಭಾಗಿ Tumkur news ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಶಾಲೆ ಇಂದು ಉನ್ನತ ದರ್ಜೆಗೇರಿದೆ. ಇದರ ಸವಿನೆನಪಿನಲ್ಲಿ ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೊಸ್ಕರ್ ಮೋಟಾರ್ ಕಂಪನಿಯ ಸುಮಾರು 2 ಕೋಟಿ ರೂ.ಗಳ ಸಿಎಸ್‌ಆರ್ ಅನುದಾನದಲ್ಲಿ […]

Continue Reading

ತುಮಕೂರು: ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ

ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ Tumkur news ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಹಾಗೂ 40ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ: ಎಂ. ರಾಮಪ್ಪ ತಿಳಿಸಿದ್ದಾರೆ. ನಗರದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ನಿಗಮದ […]

Continue Reading

ತುಮಕೂರು: ಮಕ್ಕಳನ್ನು ಸಂಗೀತದತ್ತ ಸೆಳೆಯಬೇಕು: ಮುರುಳೀಧರ ಹಾಲಪ್ಪ

ಮಕ್ಕಳನ್ನು ಸಂಗೀತದತ್ತ ಸೆಳೆಯಬೇಕು: ಮುರುಳೀಧರ ಹಾಲಪ್ಪ Tumkur news ತುಮಕೂರು: ಐರೋಪ್ಯ ರಾಷ್ಟ್ರಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತ್ರೀಯ ಸಂಗೀತ, ನೃತ್ಯ ಪರಂಪರೆಯಿಂದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು ಶಾಸ್ತ್ರೀಯ ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ವಿಕಾಸ ರಂಗ(ರಿ), ತುಮಕೂರು ಶಾಖೆವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ […]

Continue Reading

ತುಮಕೂರು: ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಿಲ್ಲ: ಮುರುಳೀಧರ ಹಾಲಪ್ಪ

ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಿಲ್ಲ: ಮುರುಳೀಧರ ಹಾಲಪ್ಪ Tumkur news ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲಿಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ. ಇದು ಬಿಜೆಪಿಯಾ ಊಹಾಪೋಹ ಅಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಜಯನಗರ ಪೂರ್ವದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಎಸ್.ಐ.ಆರ್.ಗೆ ಪೂರಕವಾಗಿ ಹೆಲ್ಪ್ ಲೈನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಮತಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಬೇಕೆಂದರೆ, ರೇಷನ್ ಕಾರ್ಡು, ಪಾಸ್ […]

Continue Reading