ತುಮಕೂರು: ಡಿಕೆ ಸಂಪುಟದಲ್ಲಿ ತುಮಕೂರಿನ ಯಾರಿಗೆಲ್ಲ ಮಂತ್ರಿ ಸ್ಥಾನ?

ಡಿಕೆ ಸಂಪುಟದಲ್ಲಿ ತುಮಕೂರಿನ ಯಾರಿಗೆಲ್ಲ ಮಂತ್ರಿ ಸ್ಥಾನ? ರಂಗನಾಥ್, ಶ್ರೀನಿವಾಸ್’ಗೆ ಸಚಿವ ಸ್ಥಾನ? ರಫೀಕ್ ಅಹಮದ್, ಗೌರಿಶಂಕರ್’ಗೆ ಮಣೆ; ರಾಜಣ್ಣಗೆ ಹಿನ್ನಡೆ; ಪರಂಗಿದೆಯೇ ಜಾಕ್ ಪಾಟ್? -ಅಶೋಕ್ ಆರ್.ಪಿ ತುಮಕೂರು: ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಜಿಲ್ಲೆಯ ಯಾರಿಗೆಲ್ಲಾ ಮಂತ್ರಿ ಪದವಿ ಸಿಗುತ್ತದೆ? ಹೀಗೊಂದು ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಉತ್ತುಂಗದಲ್ಲಿರುವ ಹೊತ್ತಿನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸುವ ಕಲ್ಪತರು ನಾಡಿನ ಜನರ ನಿರೀಕ್ಷೆಯೂ ಹೆಚ್ಚಾಗಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ […]

Continue Reading

ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು; ಜನರಿಗೆ ಮತ್ತೊಂದು ಹೊರೆ

ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ನಿಗಮದ ಅಧ್ಯಕ್ಷ Tumkur news ತುಮಕೂರು: ಕೇಂದ್ರ ಸರ್ಕಾರವು ಇಂಧನದ ಬೆಲೆ ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಏರಿಕೆ ಆಗಲಿದೆ ಎಂದು ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಇದೇ ರೀತಿಯಲ್ಲಿ ಬೆಲೆ ಏರಿಕೆ ಮಾಡುತ್ತಿದ್ದರೆ ನಾವು ಬಸ್ ಅನ್ನು ನೀರಿನಲ್ಲಿ ಓಡಿಸಲು ಆಗುತ್ತದೆಯೇ, ನಾವು ಕೂಡ ಜಾಸ್ತಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.

Continue Reading

ತುಮಕೂರು: ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನಲ್ಲಿ ಸ್ಪೂರ್ತಿ ಸಮಾರೋಪ ಸಮಾರಂಭ

ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನಲ್ಲಿ ಸ್ಪೂರ್ತಿ ಸಮಾರೋಪ ಸಮಾರಂಭ Tumkur news ತುಮಕೂರು: ಪಠ್ಯದಾಚೆಗೂ ಜ್ಞಾನವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಆ ಕೆಲಸವನ್ನು ಸಿದ್ದಗಂಗಾ ಶಿಕ್ಷಣ ಸಂಸ್ಥೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಬೆಂಗಳೂರಿನ ಎಸ್.ಜೆ.ಆರ್.ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮ ಸಿದ್ದರಾಜು ಹೇಳಿದರು. ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ಕ್ರೀಡೆ, ಸಾಂಸ್ಕೃತಿಕ […]

Continue Reading

ತುಮಕೂರು: ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆಯ ತಲಾ ಆದಾಯ ಇಡೀ ದೇಶದಲ್ಲೇ ಮುಂಚೂಣಿಯಲ್ಲಿದೆ; ಸಿಎಂ ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ; ತುಮಕೂರಿನಲ್ಲಿ ಸಾಧನಾ ಸಮರ್ಪಣೆಯಲ್ಲಿ ಸಿದ್ದು ಗುದ್ದು Tumkur news ತುಮಕೂರು: ದೇಶಕ್ಕೆ ಸ್ವಾತಂತ್ರ ಬಂದಾಗಿನಿಂದಲೂ 53.11 ಲಕ್ಷ ಕೋಟಿ ರೂ. ದೇಶದ ಸಾಲವಿತ್ತು, ಮೋದಿ ಅಧಿಕಾರಕ್ಕೆ ಬಂದ ನಂತರ 120 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ದೇಶವನ್ನು ಹಾಳು ಮಾಡಿ, ಹಿಂದು ಮುಸ್ಲಿಂ ನಡುವೆ ದ್ವೇಷ ತಂದು ಹಾಕುವ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಈ ದೇಶ […]

Continue Reading

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ Tumkur news ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. […]

Continue Reading

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ

ನಾಳೆ ತುಮಕೂರಿನಲ್ಲಿ ಸರ್ಕಾರದ ಸಮರ್ಪಣಾ ಸಮಾವೇಶ; ಸಿಎಂ ಸಿದ್ದರಾಮಯ್ಯ ಭಾಗಿ Tumkur news ತುಮಕೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದೆ. ಈ ಸುಸಂದರ್ಭದಲ್ಲಿ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ […]

Continue Reading

ತುಮಕೂರು: ಅಪ್ರಾಪ್ತ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ತಂದೆಯ ಬಂಧನ

ಅಪ್ರಾಪ್ತ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ತಂದೆಯ ಬಂಧನ ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ ತಾಯಿಗೆ ಅಘಾತ ಕಾದಿತ್ತು. ತನ್ನ ಪತಿಯೇ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ ಎಂದು ಗೊತ್ತಾದಾಗ‌ ತಾಯಿಗೆ ಆಘಾತವಾಗಿದೆ. ಒಂದು ಸಣ್ಣ ಪ್ರೇಮ ಪ್ರಕರಣ ಮಗಳ ಜೀವವನ್ನೇ ಕಸಿದಿದೆ. Tumkur news ತುಮಕೂರು: ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತಿಮ್ಮರಾಯಪ್ಪ […]

Continue Reading

ತುಮಕೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಸ್ವಾಗತಾರ್ಹ; ಇಕ್ಬಾಲ್ ಅಹಮದ್ 2022ರಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ, ವಿದ್ಯಾರ್ಥಿಗಳಲ್ಲಿ ಹಿಂದೂ, ಮುಸ್ಲಿಂ ಎಂಬ ದ್ವೇಷ ಹರಿಡಿದ್ದು ಬಿಜೆಪಿ ಸರಕಾರ. ಆಗಿದ್ದ ತಪ್ಪನ್ನು ಸರಕಾರ ಸರಿಪಡಿಸಿದೆ. – ಇಕ್ಬಾಲ್ ಅಹಮದ್, ತುಮಕೂರು Tumkur news ತುಮಕೂರು: ಸರಕಾರ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಹೇಳಿದರು. ನಗರದಲ್ಲಿ ಶನಿವಾರ […]

Continue Reading

ತುಮಕೂರು: ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ

ನೀಟ್(NEET) ರದ್ದು ಮಾಡುವಂತೆ; ಕಾಂಗ್ರೆಸ್ ಆಗ್ರಹ ‘ನೀಟ್ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೇಬುಗಳಿಲ್ಲದ ಬಟ್ಟೆ ಧರಿಸಿ,ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಲ್ಲದೆ, ಕುಡಿಯುವ ನೀರಿನ ಬಾಟಲಿಯನ್ನು ತೆಗೆದುಕೊಂಡು ಹೋಗದೆ ಕಷ್ಟಪಟ್ಟು ಪರೀಕ್ಷೆ ಬರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಪರೀಕ್ಷೆ ಎಂದರೆ ವಿದ್ಯಾರ್ಥಿಗಳ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಮೊದಲು ಆಲೋಚಿಸಬೇಕು. ಸರಕಾರ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಿ, ತಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು’. – ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ತುಮಕೂರು […]

Continue Reading

ತುಮಕೂರು: ವೈದ್ಯ ಲೋಕವೇ ಅಚ್ಚರಿ ಪಡುವಂತ ಸಾಧನೆ ಮಾಡಿದ ತುಮಕೂರು ಜಿಲ್ಲಾಸ್ಪತ್ರೆ!

ಎಂಟು ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸಿದ ತುಮಕೂರು ಜಿಲ್ಲಾಸ್ಪತ್ರೆ! ಇಡೀ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಸಹಯೋಗವಿಲ್ಲದೆ ಈ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿರುವ ಏಕೈಕ ಆಸ್ಪತ್ರೆ Tumkur news ತುಮಕೂರು: ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

Continue Reading