ತುಮಕೂರು: ರಾಮಾಯಣದಿಂದ ಬದುಕಿಗೆ ಸಮಗ್ರ ದೃಷ್ಟಿ: ಸ್ವಾಮಿ ವೀರೇಶಾನಂದ ಸರಸ್ವತೀ

ರಾಮಾಯಣದಿಂದ ಬದುಕಿಗೆ ಸಮಗ್ರ ದೃಷ್ಟಿ: ಸ್ವಾಮಿ ವೀರೇಶಾನಂದ ಸರಸ್ವತೀ Tumkur news ತುಮಕೂರು: ‘ರಾಮಾಯಣವು ಮಾನವ ಬದುಕಿಗೆ ಅತಿ ಸಮೀಪದ ಇತಿಹಾಸ, ವ್ಯವಹಾರ ಕ್ಷೇತ್ರಕ್ಕೆ ನೀತಿಯ ಸಾಗರ, ಸಾಮಾಜಿಕ ಕ್ಷೇತ್ರಕ್ಕೆ ಸಾಂಸ್ಕೃತಿಕ ನೆಲೆಗಟ್ಟನ್ನು ನೀಡಿರುವಂಥದ್ದು. ಜನರ ಸಾಮಾಜಿಕ ಮತ್ತು ನೈತಿಕ ಸಮತೋಲನಕ್ಕೆ ಅತ್ಯವಶ್ಯಕವಾದ ವಿಚಾರಗಳು ರಾಮಾಯಣದಲ್ಲಿವೆ’ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥರಾದ ಸ್ವಾಮಿ ವೀರೇಶಾನಂದ ಸರಸ್ವತೀ ಅಭಿಪ್ರಾಯಪಟ್ಟರು. ಅವರು ಶ್ರೀರಾಮನವಮಿಯ ಅಂಗವಾಗಿ ಆಶ್ರಮದಲ್ಲಿ ಆಯೋಜಿಸಿದ್ದ ‘ಶಾರದಾ ನಿನಾದ’ ವಿಶೇಷ ಸತ್ಸಂಗದಲ್ಲಿ ಉಪನ್ಯಾಸ ನೀಡಿದರು. ‘ನಾಗರಿಕತೆಯು ಮಾನವನ […]

Continue Reading

ತುಮಕೂರು: ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಭದ್ರತೆಗೆ 15 ಸಾವಿರ ಪೊಲೀಸರ ನಿಯೋಜನೆ

ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಭೇಟಿ: ನಗರದಲ್ಲಿ ಪೊಲೀಸ್ ಭದ್ರತೆ, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ Tumkur news ತುಮಕೂರು: ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, […]

Continue Reading

ತುಮಕೂರು ಹಾಲು ಒಕ್ಕೂಟ: ಮರು ಮತ ಎಣಿಕೆಯಲ್ಲಿ ಇಬ್ಬರಿಗೆ ಗೆಲುವು

ತುಮಕೂರು ಹಾಲು ಒಕ್ಕೂಟ: ಮರು ಮತ ಎಣಿಕೆಯಲ್ಲಿ ಇಬ್ಬರಿಗೆ ಗೆಲುವು Tumkur news ತುಮಕೂರು: ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳಿಗೆ ಹೈಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಗೆ ನಡೆದು ಇಬ್ಬರು ನೂತನ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ. ತುಮಕೂರು ಹಾಲು ಒಕ್ಕೂಟಕ್ಕೆ 2024ರ ನವೆಂಬರ್ 10ರಂದು ಚುನಾವಣೆ ನಡೆದಿತ್ತು. ಬಳಿಕ ಎರಡು ತಿಂಗಳ ನಂತರ ಮತ ಎಣಿಕೆಯೂ ನಡೆದಿತ್ತು. ಆ ಸಂದರ್ಭದಲ್ಲಿ ಪಾವಗಡ ಕ್ಷೇತ್ರದಿಂದ ಚಂದ್ರಶೇಖರರೆಡ್ಡಿ ಮತ್ತು ಮಧುಗಿರಿ […]

Continue Reading

ಸಿದ್ಧಗಂಗಾ ಮಠವೂ ಸೇರಿದಂತೆ ಕುಡಿಯುವ ನೀರಿನ ಎಲ್ಲ ಯೋಜನೆಗಳ ವಿದ್ಯುತ್‌ ಬಿಲ್‌ ಪಾವತಿಗೆ ಕ್ರಮ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡರ ಪ್ರಶ್ನೆಗೆ ಸರ್ಕಾರದ ಉತ್ತರ ಸಿದ್ಧಗಂಗಾ ಮಠವೂ ಸೇರಿದಂತೆ ಕುಡಿಯುವ ನೀರಿನ ಎಲ್ಲ ಯೋಜನೆಗಳ ವಿದ್ಯುತ್‌ ಬಿಲ್‌ ಪಾವತಿಗೆ ಕ್ರಮ Tumkur news ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ಬೂರು-ಗೂಳೂರು, ಬೆಳ್ಳಾವಿ ಏತ ನೀರಾವರಿ ಯೋಜನೆ, ಸಿದ್ಧಗಂಗಾ ಮಠಕ್ಕೆ ನೀರು ಪೂರೈಸುವ ಮತ್ತು ದೇವರಾಯಪಟ್ಟಣ ಏತ ನೀರಾವರಿ ಯೋಜನೆಗಳ ವಿದ್ಯುತ್‌ ಬಿಲ್‌ ಬಾಕಿ ಪಾವತಿ ಮಾಡಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ಅಡಚಣೆ ಇಲ್ಲದಂತೆ ಸರ್ಕಾರ ಕ್ರಮ […]

Continue Reading

ತುಮಕೂರಿನಲ್ಲೇ ಕೆಲಸ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರಿನಲ್ಲೇ ಕೆಲಸ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಖಾಲಿಯಿರುವ ಕಚೇರಿ ಸಹಾಯಕ, ಅಟೆಂಡರ್ ಹಾಗೂ ವಾಚ್‌ಮನ್, ಗಾರ್ಡನರ್ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಸಹಾಯಕ ಹುದ್ದೆಗೆ BSW/BA/B.Com ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮೂಲ ಲೆಕ್ಕ ನಿರ್ವಹಣೆ ಮಾಡುವ ಅರ್ಹತೆ ಹೊಂದಿದ್ದು, ಸ್ಥಳೀಯ ಭಾಷೆಯನ್ನು ಅಡೆತಡೆಯಿಲ್ಲದೆ […]

Continue Reading

ತುಮಕೂರು: ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ: ಜಿಲ್ಲಾಧಿಕಾರಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”: ಜಿಲ್ಲಾಧಿಕಾರಿ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ […]

Continue Reading

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ Tumkur News ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸಕ್ತ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2026ರ ಏಪ್ರಿಲ್ ತಿಂಗಳ ಅಂತ್ಯದೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ರಿಯಾಯತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಬಿ. ತಿಳಿಸಿದ್ದಾರೆ. ಆಸ್ತಿ ಮಾಲೀಕರು ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಏಪ್ರಿಲ್ 30ರೊಳಗಾಗಿ ನಗದು ಪಾವತಿ ಕೌಂಟರ್’ಗಳ ಮೂಲಕ, ಕರ್ನಾಟಕ ಒನ್ ಕೇಂದ್ರ, ಆನ್‍ಲೈನ್ www.tumakurucity.mrc.gov.in […]

Continue Reading