ತುಮಕೂರು: ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ಗಣೇಶೋತ್ಸವ; ಹಿರಿಯ ನಟ ಶ್ರೀನಾಥ್ ಭಾಗಿ

ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ಗಣೇಶೋತ್ಸವ; ಹಿರಿಯ ನಟ ಶ್ರೀನಾಥ್ ಭಾಗಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿಯಿಂದ 50ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ನಟ ಶ್ರೀನಾಥ್ ಭಾಗವಹಿಸಿದರು. Tumkurnews.in ತುಮಕೂರು: ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹ, ಪ್ರೀತಿ ಉಸಿರಾಗಿರಬೇಕು. ಉಸಿರು ಇರುವವರೆಗೂ ಸ್ನೇಹ ಜೀವಂತವಾಗಿರಬೇಕು ಎಂದು ಹಿರಿಯ ನಟ ಶ್ರೀನಾಥ್ ಹೇಳಿದರು. ನಗರದ ವಿನಾಯಕ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 50ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ […]

Continue Reading

ಡಾ.ಜಿ ಪರಮೇಶ್ವರ್’ರಿಂದ ಮಾದಿಗರಿಗೆ ಅನ್ಯಾಯ: ವೈ.ಹೆಚ್. ಹುಚ್ಚಯ್ಯ

ಕಾಂಗ್ರೆಸ್‌ನಿಂದ ಮಾದಿಗ ಸಮುದಾಯಕ್ಕೆ ಅಧಿಕಾರ ವಂಚನೆ: ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಆಕ್ರೋಶ “ವಾಮನನು ಬಲಿಚಕ್ರವರ್ತಿಯನ್ನು ತುಳಿಯುವಂತೆ ಡಾ.ಜಿ ಪರಮೇಶ್ವರ್ ಅವರು ವಾಮನನಾಗಿ ಮಾದಿಗ ಸಮಾಜದ ಮುಖಂಡರಿಗೆ ಅವಕಾಶ ಸಿಗದಂತೆ ತುಳಿಯುತ್ತಿದ್ದಾರೆ. -ವೈ.ಹೆಚ್.ಹುಚ್ಚಯ್ಯ. Tumkurnews.in ತುಮಕೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ. ಸರ್ಕಾರದ ಅನೇಕ ಅಧಿಕಾರಸ್ಥರು, ಕಾಣದ ಕೈಗಳು ಮಾದಿಗ ಮುಖಂಡರು ಅಧಿಕಾರಕ್ಕೆ ಬಾರದಂತೆ ವ್ಯವಸ್ಥಿತವಾಗಿ ವಂಚನೆ ಮಾಡುತ್ತಿದ್ದಾರೆ ಎಂದು ಕರ್ನಾಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಆಪಾದಿಸಿದರು. […]

Continue Reading

ಊರ್ಡಿಗೆರೆಯಲ್ಲಿ ಸೆ.26ರಂದು ಪ್ರಜಾಸೇವಾ ಆಂದೋಲ‌ನ

ಊರ್ಡಿಗೆರೆಯಲ್ಲಿ ಸೆ.26ರಂದು ಪ್ರಜಾಸೇವಾ ಆಂದೋಲ‌ನ Tumkurnews.in ತುಮಕೂರು: ತಾಲ್ಲೂಕಿನ ಊರ್ಡಿಗೆರೆ ಗ್ರಾಮದ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಸೆಪ್ಟೆಂಬರ್ 26ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ. ಕಾರ್ಯಕ್ರಮವು ಶಾಸಕ ಬಿ. ಸುರೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿ, ಸರ್ಕಾರಿ ಯೋಜನೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲು […]

Continue Reading

ತುಮಕೂರು: ಕಾಲ್ನಡಿಗೆಯಲ್ಲಿಯೇ ಕಾಮಗಾರಿ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ

ಕಾಮಗಾರಿ ಪ್ರಗತಿ ವಿಳಂಬವಾದರೆ ಅಧಿಕಾರಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ; ಕಾಲ್ನಡಿಗೆಯಲ್ಲಿಯೇ ಕಾಮಗಾರಿ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ Tumkurnews.in ತುಮಕೂರು: ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪ ತೊಟ್ಟಿರುವ ರಾಜ್ಯ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು, ಗುರುವಾರ ತಿಪಟೂರು ಸಮೀಪದ ಚೌಡ್ಲಪುರದ ಎತ್ತಿನಹೊಳೆ ಕಾಮಗಾರಿಯ ಪ್ಯಾಕೇಜ್ 18 ಹಾಗೂ ತಿಪಟೂರಿನ ಬೈಪಾಸ್ ಬಳಿ ನಡೆಯುತ್ತಿರುವ ‘ಎಲಿವೇಟೆಡ್ ಟ್ರಫ್’ ಕಾಮಗಾರಿಗಳನ್ನು ಖುದ್ದು ಪರಿಶೀಲನೆ ನಡೆಸಿದರು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಅಕ್ಟೋಬರ್ ಅಂತ್ಯದ […]

Continue Reading

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ Tumkurnews.in ತುಮಕೂರು: ಬರುವ ನವೆಂಬರ್ ಮಾಹೆಯ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಜಿಲ್ಲೆಯ ಗುಬ್ಬಿ ತಾಲೂಕು ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಪ್ಯಾಕೇಜ್ 11ರ ಕಾಮಗಾರಿ ಸ್ಥಳಕ್ಕೆ ಗುರುವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜ್ಯದ ಮಹತ್ವಾಕಾಂಕ್ಷಿ ಎತ್ತಿನಹೊಳೆ ನೀರಾವರಿ ಯೋಜನೆ ಮೂಲಕ ತುಮಕೂರಿಗೆ ನೀರು ಹರಿಸಲು ಸರ್ಕಾರ ಪಣತೊಟ್ಟಿದೆ. […]

Continue Reading

ಬೆಂಗಳೂರಿನಿಂದ ಕುಣಿಗಲ್‍ಗೆ ಎಸಿ ಬಸ್ ಸೇವೆ: ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

ಬೆಂಗಳೂರಿನಿಂದ ಕುಣಿಗಲ್‍ಗೆ ಎಸಿ ಬಸ್ ಸೇವೆ: ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ Tumkurnews.in ತುಮಕೂರು: ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‍ಗೆ 8 ಬಿಎಂಟಿಸಿ ಹವಾನಿಯಂತ್ರಿತ(ಎಸಿ) ವಜ್ರ ವಿಸ್ತಾರ ಬಸ್‍ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ ತೋರಿದರು. ಕುಣಿಗಲ್‍ನಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಾರಿಗೆ ಸಂಪರ್ಕದಿಂದ ಕುಣಿಗಲ್ ರಾಜಧಾನಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದರು. ಕೇಂದ್ರ ಸರ್ಕಾರದಿಂದ 4550 ಎಲೆಕ್ಟ್ರಿಕ್ ಬಸ್ಸುಗಳನ್ನು ಬಿಎಂಟಿಸಿಗೆ ಪಡೆಯಲಾಗುತ್ತಿದೆ. ಈ ಬಸ್ಸುಗಳು ಮುಂದಿನ […]

Continue Reading

ಸೆ.21ರಿಂದ ಪಿಡಿಓಗಳ ಪ್ರತಿಭಟನೆ: ಗ್ರಾಪಂಗಳ ಹಲವು ಸೇವೆಗಳು ಬಂದ್

ಸೆ.21ರಿಂದ ಪಿಡಿಓಗಳ ಪ್ರತಿಭಟನೆ: ಗ್ರಾಪಂಗಳ ಹಲವು ಸೇವೆಗಳು ಬಂದ್ Tumkur news.in ತುಮಕೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಗಳ ವಿವಿಧ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ.21 ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಪಂ ಸಿಇಓ ಬಿ.ವಿ. ಅಶ್ವಿಜ ಅವರಿಗೆ ಮನವಿ […]

Continue Reading

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಇಂದಿನಿಂದ ತಿಂಗಳಿಡೀ ಸೇವಾ ಸಂಕಲ್ಪ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಇಂದಿನಿಂದ ತಿಂಗಳಿಡೀ ಸೇವಾ ಸಂಕಲ್ಪ ಅಭಿಯಾನ ಸೇವಾ ಸಂಕಲ್ಪ ಅಭಿಯಾನದ ಪ್ರಥಮ ಕಾರ್ಯಕ್ರಮವಾಗಿ ಸೆಪ್ಟೆಂಬರ್ 17ರಂದು ಸರ್ಕಾರದ ಯೋಜನೆಗಳು ಫಲಾನುಭವಿಗಳ ಬಾಗಿಲಿಗೆ ಬಾಗಿಲಿಗೆ ತಲುಪಬೇಕು ಎಂಬುದು ಸೇವಾ ಸಂಕಲ್ಪ ಅಭಿಯಾನದ ಪ್ರಮುಖ ಆಶಯವಾಗಿದೆ. Tumkurnews.in ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರು ಸಂವಿಧಾನಿಕ ಅಧಿಕಾರದ ಜವಾಬ್ದಾರಿ ವಹಿಸಿಕೊಂಡು 25ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ, ಭಾರತೀಯ ಜನತಾ ಪಾರ್ಟಿಯಿಂದ ದೇಶಾದ್ಯಂತ ಒಂದು ತಿಂಗಳ ‘ಸೇವಾ ಸಂಕಲ್ಪ ಅಭಿಯಾನ’ […]

Continue Reading

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿಗಳ ಸೂಚನೆ Tumkurnews ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸುತ್ತಾ, ಅರ್ಹತೆ ಹೊಂದಿರದ ಪ್ರಕರಣಗಳನ್ನು ಕಡ್ಡಾಯವಾಗಿ ಜಂಟಿ ಸ್ಥಳ ಪರಿಶೀಲನೆ ನಡೆಸಿ ವಿಡಿಯೋ ಮತ್ತು ಛಾಯಾಚಿತ್ರಗಳನ್ನು […]

Continue Reading

ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಾಣ: ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧಾರ

ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಾಣ: ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧಾರ Tumkurnews.in ತುಮಕೂರು: ಮಹಿಳಾ ವಸತಿ ನಿಲಯವನ್ನು ಬೆಂಗಳೂರಿನಲ್ಲಿ ಆರಂಭಿಸಲು ಉಲುಚುಕಮ್ಮೆ ಬ್ರಾಹ್ಮಣ ಮಹಾಸಭೆ ನಿರ್ಧರಿಸಿದೆ ಎಂದು ಮಹಿಳಾ ಹಾಸ್ಟೆಲ್ ಯೋಜನಾ ಸಮಿತಿ ಗೌರವ ಅಧ್ಯಕ್ಷ ಬಿ.ವಿ.ಕುಮಾರ್ ತಿಳಿಸಿದರು. ಗ್ರಾಮಂತರ ಪ್ರದೇಶದಿಂದ ಬೆಂಗಳೂರಿಗೆ ಬರುವ ವಿದ್ಯಾರ್ಥಿನಿಯರಿಗೆ ಮಹಿಳಾ ಹಾಸ್ಟೆಲ್, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಹಾಗೂ ನೆಲ ಮಹಡಿಯಲ್ಲಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಈ ಕಾರ್ಯಕ್ಕೆ ಉಲುಚುಕಮ್ಮೆ ಸಮುದಾಯದ ಎಲ್ಲರ ಸಹಕಾರ […]

Continue Reading