ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ Tumkurnews.in ತುಮಕೂರು: ತಂದೆ-ತಾಯಿ, ಗುರುಗಳು ಮಕ್ಕಳಿಗೋಸ್ಕರ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಮೋಹನ್‌ಕುಮಾರ್ ಚಂದ್ರಗುತ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಓಪನ್ ಆಡಿಟೋರಿಯಂನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಸ್ಕೌಟ್ಸ್ ಅಂಡ್ […]

Continue Reading

ತುಮಕೂರು: ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ

ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ Tumkurnews.in ತುಮಕೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ ಅವರ ವಿರುದ್ದವೇ ಎಫ್.ಐ.ಆರ್ ದಾಖಲಿಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, […]

Continue Reading

ತುಮಕೂರು: ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ ೨೨ಸಾವಿರಕ್ಕೂ […]

Continue Reading

ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ 

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ವಿವಾಹ ಆಪೇಕ್ಷಿತರು, ಸಂತಾನಭಾಗ್ಯ, ಉದ್ಯೋಗ, ವ್ಯವಹಾರ ಸೇರಿದಂತೆ ನಾನಾ ಬಗೆಯ ಇಷ್ಟಾರ್ಥಗಳ ಪೂರೈಕೆಗಾಗಿ […]

Continue Reading

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ Tumkur news ತುಮಕೂರು: ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ಹಬ್ಬ ಬಲು ದುಬಾರಿಯಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ ಖರೀದಿಗೆ […]

Continue Reading

ತುಮಕೂರು: ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ Tumkur news ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ […]

Continue Reading

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ, ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […]

Continue Reading

ತುಮಕೂರು: ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ Tumkur news ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮುಖ್ಯ ಉದ್ದೇಶವಾಗಿದ್ದು, ಈ ಪ್ರಕ್ರಿಯೆ ದೇಶದೆಲ್ಲೆಡೆ ಸುಸೂತ್ರವಾಗಿ ನಡೆಸಿದೆ. ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬ ಭಾರತೀಯರು ಮತದಾರರಾಗಲು ಅರ್ಹರು. ಅದಕ್ಕೆ ಯಾವುದೇ ಆಕ್ಷೇಪಣೆ ಇರುವುದಿಲ್ಲ. ಆದರೆ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಶಾಶ್ವತ […]

Continue Reading

ತುಮಕೂರು: ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾರ್ಗಿಲ್ ವಿಜಯ ಓಟ ಆಯೋಜನೆ: ತುಮಕೂರು ರನ್ನರ್ ಕ್ಲಬ್ ಟ್ರಸ್ಟ್

ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾರ್ಗಿಲ್ ವಿಜಯ ಓಟ ಆಯೋಜನೆ: ತುಮಕೂರು ರನ್ನರ್ ಕ್ಲಬ್ ಟ್ರಸ್ಟ್ ತುಮಕೂರು ಅಮಾನಿಕೆರೆಯ ಸುತ್ತಲು ನಿರ್ಮಿಸಿರುವ ವಾಕೀಂಗ್ ಪಾಥ್ ನಲ್ಲಿ ಈ ತುಮಕೂರು ಲೇಖ್ ಓಟ-2026 ನಡೆಯಲಿದ್ದು, ಎಂಟು ನೂರು ಜನರು ಈ ಓಟದಲ್ಲಿ ಪಾಲ್ಗೊಳ್ಳಲು ಹೆಸರು ನೊಂದಾಯಿಸಿದ್ದು, ಎರಡು ಹಂತಗಳಲ್ಲಿ ಈ ಓಟ ನಡೆಯಲಿದೆ. ಮೊದಲ ಹಂತದಲ್ಲಿ ಅಮಾನಿಕೆರೆ ಸುತ್ತಲಿನ ವಾಕಿಂಗ್ ಪಾಥ್ 5.5 ಕಿ.ಮಿ. ದೂರವನ್ನು ಯುವಕರು, ನಂತರ ವಾಕ್ ಮಾಡುವವರು ಭಾಗವಹಿಸಲಿದ್ದಾರೆ. Tumkur […]

Continue Reading

ತುಮಕೂರು: ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಿಲ್ಲ: ಮುರುಳೀಧರ ಹಾಲಪ್ಪ

ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಿಲ್ಲ: ಮುರುಳೀಧರ ಹಾಲಪ್ಪ Tumkur news ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲಿಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ. ಇದು ಬಿಜೆಪಿಯಾ ಊಹಾಪೋಹ ಅಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಜಯನಗರ ಪೂರ್ವದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಎಸ್.ಐ.ಆರ್.ಗೆ ಪೂರಕವಾಗಿ ಹೆಲ್ಪ್ ಲೈನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಮತಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಬೇಕೆಂದರೆ, ರೇಷನ್ ಕಾರ್ಡು, ಪಾಸ್ […]

Continue Reading